ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಶವಂತಪುರ ರೈಲು ನಿಲ್ದಾಣ, ನಮ್ಮ ಮೆಟ್ರೋ ಸಂಪರ್ಕಿಸಲು ಫ್ಲೈ ಓವರ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 16 : ಯಶವಂತಪುರ ರೈಲು ನಿಲ್ದಾಣ ಬೆಂಗಳೂರು ನಗರದ ಹೆಚ್ಚು ಜನಸಂದಣಿ ಇರುವ 2ನೇ ನಿಲ್ದಾಣವಾಗಿದೆ. ರೈಲ್ವೆ ನಿಲ್ದಾಣದ ಸಮೀಪವೇ ಈಗ ನಮ್ಮ ಮೆಟ್ರೋ ರೈಲು ಸಂಚಾರ ನಡೆಸುತ್ತಿದೆ.

ರೈಲ್ವೆ ನಿಲ್ದಾಣದಿಂದ ನಮ್ಮ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದಾಗಿ ಜನರು ರಾಷ್ಟ್ರೀಯ ಹೆದ್ದಾರಿಯನ್ನು ದಾಟಿ ಹರಸಾಹಸ ಪಟ್ಟು ಮೆಟ್ರೋ ನಿಲ್ದಾಣ ತಲುಪುವುದುದಕ್ಕೆ ತಡೆ ಬೀಳಲಿದೆ.

ಏರ್‌ ಪೋರ್ಟ್‌ನಂತೆ ಬದಲಾಗಲಿದೆ ಯಶವಂತಪುರ ರೈಲ್ವೆ ನಿಲ್ದಾಣಏರ್‌ ಪೋರ್ಟ್‌ನಂತೆ ಬದಲಾಗಲಿದೆ ಯಶವಂತಪುರ ರೈಲ್ವೆ ನಿಲ್ದಾಣ

ಯಶವಂತಪುರ ರೈಲು ನಿಲ್ದಾಣದ ಮುಖ್ಯ ದ್ವಾರದಿಂದ ನಮ್ಮ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕಿಸಲು ಪಾದಚಾರಿ ಮೇಲ್ಸೆತುವೆ ನಿರ್ಮಾಣ ಮಾಡಲಾಗುತ್ತದೆ. ರೈಲ್ವೆ ನಿಲ್ದಾಣದಿಂದ ಮೆಟ್ರೋ ನಿಲ್ದಾಣ ಸುಮಾರು 2 ಕಿ.ಮೀ. ದೂರದಲ್ಲಿದೆ.

ರೈಲು ನಿಲ್ದಾಣದಿಂದ ಬಿಎಂಟಿಸಿ ಬಸ್ ಎಲ್ಲಿಗೆ?; ವೇಳಾಪಟ್ಟಿರೈಲು ನಿಲ್ದಾಣದಿಂದ ಬಿಎಂಟಿಸಿ ಬಸ್ ಎಲ್ಲಿಗೆ?; ವೇಳಾಪಟ್ಟಿ

Yeshwantpur railway station

ಬಿಎಂಆರ್‌ಸಿಎಲ್ ಫ್ಲೈ ಓವರ್ ನಿರ್ಮಾಣ ಮಾಡಲಿದ್ದು, ನೈಋತ್ಯ ರೈಲ್ವೆ ಸೇತುವೆ ನಿರ್ಮಾಣ ಮಾಡಲು ಒಪ್ಪಿಗೆ ನೀಡಿದೆ. 2014ರಲ್ಲಿ ನಮ್ಮ ಮೆಟ್ರೋ ಸೇವೆ ಯಶವಂತಪುರ ಮಾರ್ಗದಲ್ಲಿ ಆರಂಭವಾಗಿದ್ದು, 5 ವರ್ಷಗಳ ಬಳಿಕ ಪಾದಚಾರಿ ಮಾರ್ಗ ನಿರ್ಮಾಣ ಮಾಡಲಾಗುತ್ತಿದೆ.

ಬೆಂಗಳೂರು-ಮೈಸೂರು ನಡುವೆ ಹೊಸ ರೈಲು, ವೇಳಾಪಟ್ಟಿ ಬೆಂಗಳೂರು-ಮೈಸೂರು ನಡುವೆ ಹೊಸ ರೈಲು, ವೇಳಾಪಟ್ಟಿ

ಫ್ಲೈ ಓವರ್ ಬಂದು ಸೇರುವ ಜಾಗದಲ್ಲಿ ಫ್ಲಾಟ್‌ ಫಾರ್ಮ್ ಟಿಕೆಟ್ ಕೌಂಟರ್ ನಿರ್ಮಾಣ ಮಾಡಬೇಕು ಎಂದು ಪ್ರಯಾಣಿಕರು ಒತ್ತಾಯಿಸುತ್ತಿದ್ದಾರೆ. ಸೇತುವೆ ನಿರ್ಮಾಣ ಮಾಡಲು ಎಷ್ಟು ವೆಚ್ಚವಾಗಲಿದೆ? ಎಂಬುದು ಇನ್ನೂ ಅಂತಿಮಗೊಂಡಿಲ್ಲ.

ಪ್ರತಿನಿತ್ಯ ಸುಮಾರು 1 ಲಕ್ಷ ಪ್ರಯಾಣಿಕರು ಯಶವಂತಪುರ ರೈಲು ನಿಲ್ದಾಣಕ್ಕೆ ಭೇಟಿ ನೀಡುತ್ತಾರೆ.ರೈಲು ನಿಲ್ದಾಣ ಹಲವು ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿತ್ತು. ಈಗ 2 ಹಂತದಲ್ಲಿ ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗುತ್ತಿದೆ.

ಮೊದಲ ಹಂತದಲ್ಲಿ 15 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಮಾದರಿಯ ಪ್ರವೇಶ ದ್ವಾರವನ್ನು ನಿರ್ಮಿಸಲಾಗುತ್ತಿದೆ. ಆಟೋ, ಕ್ಯಾಬ್, ಬೈಕ್‌ಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

English summary
Yeshwantpur railway station will get a footbridge that connects Namma metro station. Metro station around 2 km away fromrailway station platform.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X