ನಿಖಿಲ್ ಕುಮಾರಸ್ವಾಮಿ, ಚಾಲೇಂಜಿಂಗ್ ಸ್ಟಾರ್ ದರ್ಶನ್ ಬಳಿ ಇರೋದು ಅಸಲಿ ಹುಲಿ ಉಗುರಲ್ಲ: ಅರಣ್ಯಾಧಿಕಾರಿ ಸ್ಪಷ್ಟನೆ
ಬೆಂಗಳೂರು, ಅಕ್ಟೋಬರ್, 26: ರಾಜ್ಯದಲ್ಲಿ ಹುಲಿ ಉಗುರು ಸದ್ದು ಜೋರಾಗಿಯೇ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಸೆಲೆಬ್ರೆಟಿಗಳ ಮನೆ ಶೋಧಕಾರ್ಯ ನಡೆಸಿದ್ದು, ಈ ಪೈಕಿ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಮನೆಯಲ್ಲೂ ಕೂಡ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಹಾಗಾದರೆ ಈ ಕುರಿತು ಅಧಿಕಾರಿಗಳು ನೀಡಿದ ಸ್ಪಷ್ಟನೆ ಏನು ಅನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರ್ ಸಂತೋಷ್ ಅವರನ್ನು ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ ಹಿನ್ನೆಲೆ ಬಂಧಿಸಿದ್ದು, ಇದರ ಬೆನ್ನಲ್ಲೇ ರಾಜ್ಯದ ಹಲವೆಡೆ ಇಂತಹ ಪ್ರಕರಣ ಬೆಳಕಿದೆ ಬಂದಿದದ್ದವು. ಸೆಲೆಬ್ರೆಟಿಗಳು, ರಾಜಕಾರಣಿಗಳ ಸಂಬಂಧಿಕರು ಸೇರಿದಂತೆ ಹಲವರು ಸಂಕಷ್ಟಕ್ಕೆ ಸಿಲುಕಿದ್ದರು. ಇನ್ನು ಈ ಪ್ರಕರಣ ತನಿಖೆ ಬಳಿಕ ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ ಪುಷ್ಕರ್ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮದೊಂದಿಗೆ ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ ಪುಷ್ಕರ್ ಮಾತನಾಡಿದ್ದು, ನಿನ್ನೆ ಬೆಂಗಳೂರಿನಲ್ಲಿ 5 ಕಡೆ ಸರ್ಚ್ ಮಾಡಿದ್ದೇವೆ. ಯಾರ ಮೇಲೆ ದೂರು ಬಂದಿತ್ತೋ ಅವರ ಮನೆ ಮೇಲೆ ದಾಳಿ ಮಾಡಿ ಉಗುರನ್ನು ವಶಕ್ಕೆ ಪಡೆದುಕೊಂಡು, ಎಫ್‌ಎಸ್‌ಎಲ್‌ಗೆ ಕಳುಹಿಸುತ್ತೇವೆ. ಅಲ್ಲಿಂದ ವರದಿ ಬಂದ ಮೇಲೆ ನಮಗೆ ಯಾವುದು ಹುಲಿ ಉಗುರು ಎನ್ನುವುದು ಖಾತರಿ ಆಗುತ್ತದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಹುಲಿ ಉಗುರು ಧರಿಸಿದ್ದ ಪ್ರಕರಣ ಪ್ರಕರಣ ಸಂಬಂಧಿಸಿ ಸ್ಯಾಂಡಲ್‌ವುಡ್ ನಟರಾದ ದರ್ಶನ್, ನಿಖಿಲ್ ಕುಮಾರಸ್ವಾಮಿ, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ಮನೆಗೆ ಹೋಗಿ ವಿಚಾರಣೆ ಮಾಡಿದ್ದೇವೆ. ನಿಖಿಲ್ ಕುಮಾರಸ್ವಾಮಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ವಶಕ್ಕೆ ಪಡೆದ ಉಗುರು ಮೇಲ್ನೋಟಕ್ಕೆ ಅಸಲಿ ಅಲ್ಲ ಅಂತಾ ಅನಿಸುತ್ತಿದೆ ಎಂದು ತಿಳಿಸಿದ್ದಾರೆ.
ನಟ ಜಗ್ಗೇಶ್ ಮನೆಯಲ್ಲಿ ಸಿಕ್ಕಿರುವುದು ತುಂಬಾ ಹಳೆಯದ್ದಾಗಿದೆ. ಅವರ ಹಳೆಯ ವಿಡಿಯೋ ಹೇಳಿಕೆಯ ಅಡಿ ನಾವು ಕ್ರಮಕೈಗೊಳ್ಳಲು ಆಗುವುದಿಲ್ಲ.ಅದನ್ನು ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಉಗುರನ್ನು ಬದಲಾಯಿಸಿರುವ ಪ್ರಕರಣ ಕಂಡುಬಂದರೆ ಸಾಕ್ಷಿ ನಾಶದಡಿ ಪ್ರಕರಣ ದಾಖಲಿಸುತ್ತೇವೆ. ಸಂತೋಷ್ ಪ್ರಕರಣದಲ್ಲಿ ಹೊಸ ಹುಲಿ ಉಗುರು ಆಗಿತ್ತು, ಹಾಗಾಗಿ ಬೇಗ ಪತ್ತೆಯಾಗಿತ್ತು ಎಂದರು.












Click it and Unblock the Notifications