ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾವೇರಿ ಡ್ಯಾಂ ಯೋಜನೆಗೆ ಅರಣ್ಯ ಇಲಾಖೆ ವಿರೋಧ

By Kiran B Hegde
|
Google Oneindia Kannada News

ಬೆಂಗಳೂರು, ನ. 20: ಕರ್ನಾಟಕ ಸರ್ಕಾರದ ಉದ್ದೇಶಿತ ಕಾವೇರಿ ಡ್ಯಾಂ ನಿರ್ಮಾಣ ಯೋಜನೆಗೆ ಅರಣ್ಯ ಇಲಾಖೆಯಿಂದಲೇ ವಿರೋಧ ವ್ಯಕ್ತವಾಗಿದೆ.

ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಇಲಾಖೆಯ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿನಯ ಲೂತ್ರ, ಮೇಕೆದಾಟು ಪ್ರದೇಶದಲ್ಲಿ ಡ್ಯಾಂ ನಿರ್ಮಿಸುವುದರಿಂದ ನೂರಾರು ಎಕರೆ ಅರಣ್ಯ ನಾಶವಾಗಲಿದೆ. ಪರಿಸರಕ್ಕೆ ಧಕ್ಕೆಯಾಗಲಿದೆ. ಆದ್ದರಿಂದ ಅರಣ್ಯ ಇಲಾಖೆ ಈ ಯೋಜನೆಯನ್ನು ವಿರೋಧಿಸುತ್ತದೆ ಎಂದು ತಿಳಿಸಿದ್ದಾರೆ. [ಮತ್ತೆ ಕಾವೇರಿ ಕ್ಯಾತೆ ತೆಗೆದ ಜಯಲಲಿತಾ]

ಈ ಹಿನ್ನೆಲೆಯಲ್ಲಿ ಯೋಜನೆ ರೂಪಿಸುವ ಮೊದಲು ಸರ್ಕಾರ ಅರಣ್ಯ ಇಲಾಖೆ ಜತೆ ಚರ್ಚಿಸಿರಲಿಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದೆ. ಕರ್ನಾಟಕ ಸರ್ಕಾರದ ಯೋಜನೆ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈಗ ರಾಜ್ಯದ ಇಲಾಖೆಯಿಂದಲೇ ವಿರೋಧ ವ್ಯಕ್ತವಾಗಿರುವುದರಿಂದ ಸರ್ಕಾರಕ್ಕೆ ಮುಜುಗರದ ಸನ್ನಿವೇಶ ನಿರ್ಮಾಣವಾಗಿದೆ. [ಯೋಜನೆಗೆ ತಮಿಳುನಾಡು ಅಡ್ಡಗಾಲು]

ಕಾವೇರಿ ವನ್ಯಜೀವಿ ವಿಭಾಗವು ಹುಲಿ ಹಾಗೂ ಆನೆಗಳ ಆವಾಸ ಸ್ಥಾನವಾಗಿದ್ದು, ಅಪರೂಪದ ಜೀವಿಗಳು ಪತ್ತೆಯಾಗಿವೆ. ಆದ್ದರಿಂದ ಸರ್ಕಾರ ವನ್ಯಜೀವಿ ಧಾಮವನ್ನೂ ನಿರ್ಮಿಸಿದೆ. ಈಗ ಡ್ಯಾಂ ನಿರ್ಮಾಣದಿಂದ ಇವೆಲ್ಲವೂ ನಾಶವಾಗಲಿದೆ ಎಂದು ತಿಳಿಸಿದ್ದಾರೆ. [ಮೇಕೆದಾಟುವಿನಲ್ಲಿ ಕುಡಿಯುವ ನೀರಿಗಾಗಿ ಡ್ಯಾಂ]

ರಾಜ್ಯ ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ಪರಿಸರವಾದಿ ಡಾ. ಯಲ್ಲಪ್ಪ ರೆಡ್ಡಿ, ಇಲ್ಲಿ ಡ್ಯಾಂ ನಿರ್ಮಿಸಿದರೆ ಕಾಡು ಹಾಗೂ ಹಲವು ಗ್ರಾಮಗಳು ಮುಳುಗಡೆಯಾಗುತ್ತವೆ. ಡ್ಯಾಂ ನಿರ್ಮಾಣದಿಂದ ಉಂಟಾಗುವ ಅನಾಹುತಗಳ ಕಾರಣದಿಂದ ಎಲ್ಲೆಡೆ ವಿರೋಧ ಕೇಳಿಬರುತ್ತಿದೆ. ಆದ್ದರಿಂದ ಸರ್ಕಾರ ಈ ಉದ್ದೇಶಿತ ಯೋಜನೆ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.

mbpatil

ಕೇಂದ್ರ ಸರ್ಕಾರ ಒಪ್ಪಿಗೆ ನೀಡಿಲ್ಲ: ಯೋಜನೆ ಕುರಿತು ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ, ಕೇಂದ್ರ ಸರ್ಕಾರ ಇದುವರೆಗೂ ಯೋಜನೆಗೆ ಒಪ್ಪಿಗೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. [ಮೇಕೆದಾಟು ಯೋಜನೆ ಸ್ಥಗಿತವಿಲ್ಲ]

ರಾಜ್ಯ ಸರ್ಕಾರ ಇನ್ನೂ ಮೇಕೆದಾಟು ಯೋಜನೆಯ ವಿಸ್ತ್ರತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಜಾಗತಿಕ ಆಸಕ್ತ ಕಂಪನಿಗಳನ್ನು ಆಹ್ವಾನಿಸಿದೆ. ಡಿಪಿಆರ್ ತಯಾರಿಸಿದ ನಂತರವೇ ಯೋಜನೆ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಎಂ.ಬಿ. ಪಾಟೀಲ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

English summary
Forest department for state has opposed for Mekedatu reservoir plan proposed by Karnataka government. Chief conservative officer Vinay Lutra told that by this plan hundreds acres of forest will be destroyed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X