ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂದಿಬೆಟ್ಟದಲ್ಲಿ ಕಾಡ್ಗಿಚ್ಚು, ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ

ನಂದಿಬೆಟ್ಟದ ತಪ್ಪಲಿನಲ್ಲಿ ಕಾಡ್ಗಿಟ್ಟು ಕಾಣಿಸಿಕೊಂಡಿದೆ. ಇಂದು ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದರೂ ಈ ವರದಿ ಬರೆಯುವರೆಗೂ ಅರಣ್ಯಾಧಿಕಾರಿ ಬೆಂಕಿ ಆರಿಸದೆ ನಿರ್ಲಕ್ಷ್ಯವಹಿಸಿದ್ದಾರೆ ಎಂಬ ದೂರು ಕೇಳಿ ಬಂದಿದೆ.

By Sachhidananda Acharya
|
Google Oneindia Kannada News

ಬೆಂಗಳೂರು, ಮಾರ್ಚ್ 30: ನಂದಿಬೆಟ್ಟದ ತಪ್ಪಲಿನಲ್ಲಿ ಕಾಡ್ಗಿಟ್ಟು ಕಾಣಿಸಿಕೊಂಡಿದೆ. ಇಂದು ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದರೂ ಈ ವರದಿ ಬರೆಯುವರೆಗೂ ಅರಣ್ಯಾಧಿಕಾರಿ ಬೆಂಕಿ ಆರಿಸದೆ ನಿರ್ಲಕ್ಷ್ಯವಹಿಸಿದ್ದಾರೆ ಎಂಬ ದೂರು ಕೇಳಿ ಬಂದಿದೆ.

ಮೂಲಗಳ ಪ್ರಕಾರ ಇಂದು ಮಧ್ಯಾಹ್ನ ಬೆಂಗಳೂರಿನಿಂದ 60 ಕಿಲೋಮೀಟರ್ ಪ್ರಖ್ಯಾತ ಪ್ರವಾಸಿ ತಾಣ ನಂದಿ ಬೆಟ್ಟದ ತಪ್ಪಲಿನಲ್ಲಿರುವ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆದರೆ ಸ್ಥಳಕ್ಕೆ ಬಂದ ಅರಣ್ಯಾಧಿಕಾರಿ ಕಾಡ್ಗಿಚ್ಚು ಪರಿಶೀಲನೆ ಮಾಡಿ ತೆರಳಿದ್ದಾರೆಯೇ ಹೊರತು ಬೆಂಕಿ ಆರಿಸಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. [ಬದುಕು ಬೆಂದು ಹೋಗುವಂತೆ ಮಾಡಿದ ಬಂಡೀಪುರದ ಬೆಂಕಿ ಅನಾಹುತ]

Forest Fire Seen in Tourist Place Nandi Hills

ಇಲ್ಲಿನ ಸ್ಥಳೀಯರು ಹೇಳುವ ಪ್ರಕಾರ ಪ್ರತೀ ಸಲ ಇಲ್ಲಿ ಬೆಂಕಿ ಕಾಣಿಸಿಕೊಂಡಾಗಲೂ ಅರಣ್ಯ ಇಲಾಖೆಗೆ ಮಾಹಿತಿ ನೀಡುತ್ತಾರಂತೆ. ಆದರೆ ಸ್ಥಳ ಪರಿಶೀಲನೆ ಮಾಡಲು ಬರುವ ಅರಣ್ಯಾಧಿಕಾರಿಗಳು ಬೆಂಕಿ ನಂದಿಸಲು ಮನಸ್ಸು ಮಾಡುತ್ತಿಲ್ಲ ಎಂಬ ದೂರು ಕೇಳಿ ಬಂದಿದೆ.

ಕಾಡ್ಗಿಚ್ಚಿನಿಂದಾಗಿ ಇಲ್ಲಿನ ಕಾಡಿನಲ್ಲಿದ್ದ ಅಪೂರ್ವ ಔಷಧೀಯ ಮತ್ತು ಅಮೂಲ್ಯ ಮರಗಳು ಬೆಂಕಿಗಾಹುತಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಕಾಡ್ಗಿಚ್ಚಿನಿಂದ ನಾಶವಾದ ಅರಣ್ಯ ವ್ಯಾಪ್ತಿಯ ಮಾಹಿತಿ ಇನ್ನಷ್ಟೇ ಸಿಗಬೇಕಾಗಿದೆ. [ದುಷ್ಕರ್ಮಿಗಳ ಅಟ್ಟಹಾಸಕ್ಕೆ ಹೊತ್ತಿ ಉರಿಯುತ್ತಿದೆ ಬಂಡೀಪುರ ಅರಣ್ಯ!]

English summary
Huge forest fire observed in famous tourist place Nandi Hills which is 60 kilometer away from garden city Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X