ಸಚಿವ ರಮಾನಾಥ ರೈ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಬೆಂಗಳೂರು, ಮಾರ್ಚ್. 16: ಅರಣ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮನಾಥ್ ರೈ ಅವರು ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಗುರುವಾರ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ರಕ್ತದೊತ್ತಡ ಮತ್ತು ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಯು.ಟಿ. ಖಾದರ್ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ರೈ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಪ್ರತಿಕ್ರಿಯಿಸಿರುವ ಖಾದರ್, ರಮಾನಾಥ ರೈ ಆರೋಗ್ಯಯುತರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.












Click it and Unblock the Notifications