ಬಡವಿದ್ಯಾರ್ಥಿಗಳಿಗೆ 1 ಲಕ್ಷ ಉಚಿತ ನೋಟ್ ಬುಕ್ ವಿತರಣೆ: ಸುರೇಶ್ ಕುಮಾರ್

ಬೆಂಗಳೂರು, ಜುಲೈ 25: ಪದ್ಮರಾಜ್ ಸಾಮಾಜಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಯುವ ವೇದಿಕೆಯಿಂದ ಬಡವಿದ್ಯಾರ್ಥಿಗಳಿಗೆ 1 ಲಕ್ಷ ಉಚಿತ ನೋಟ್ ಬುಕ್ ವಿತರಣೆ ಕಾರ್ಯ ನಡೆಯುತ್ತಿದ್ದು, ಉತ್ತಮ ಬೆಳವಣಿಗೆ ಎಂದು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಸುರೇಶ್ ಕುಮಾರ್ ಅವರು ಶ್ಲಾಘಿಸಿದರು.

ಬೆಂಗಳೂರಿನಂತಹ ಮಹಾನಗರದಲ್ಲಿ ಸಾವಿರಾರು ವಿದ್ಯಾರ್ಥಿಗಳು ಸರಿಯಾದ ಶೈಕ್ಷಣಿಕ ಸೌಲಭ್ಯವಿಲ್ಲದೆ ತೊಂದರೆಯನ್ನು ಅನುಭವಿಸುತ್ತಿದ್ದು, ಅಂತಹ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತವಾಗಿ ನೋಟ್‍ಬುಕ್ ವಿತರಿಸುತ್ತಿರುವುದು ಶ್ಲಾಘನೀಯ ವಿಷಯ ಎಂದು ಮಾಜಿ ಸಚಿವ ಹಾಗೂ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು.

ನಗರದ ಶ್ರೀ ಪದ್ಮರಾಜ್ ಸಾಮಾಜಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಯುವ ವೇದಿಕೆ ವತಿಯಿಂದ ಬಸವೇಶ್ವರ ನಗರದಲ್ಲಿ ಆಯೋಜಿಸಿದ್ದ ಬಡ ವಿದ್ಯಾರ್ಥಿಗಳಿಗೆ 1 ಲಕ್ಷ ನೋಟ್‍ಬುಕ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾದಾನ ಮಹಾದಾನ

ವಿದ್ಯಾದಾನ ಮಹಾದಾನ

ವಿದ್ಯಾದಾನ ಮಹಾದಾನ. ವಿದ್ಯೆ ಮನುಷ್ಯನ ಜೀವನದ ಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಮ್ಮ ಕೈಲಾದಷ್ಟು ಸೌಲಭ್ಯಗಳನ್ನು ನೀಡುತ್ತಾ ಬಂದಿವೆ. ಆದರೆ ಕೊನೆಯ ಹಂತದ ವಿದ್ಯಾರ್ಥಿಗಳ ಎಲ್ಲಾ ಅವಶ್ಯಕತೆಗಳನ್ನು ಪೂರೈಸುವತ್ತ ವಿಫಲವಾಗಿವೆ.

 ಉಚಿತ ನೋಟ್ ಬುಕ್ ವಿತರಣೆ

ಉಚಿತ ನೋಟ್ ಬುಕ್ ವಿತರಣೆ

ಈ ನಿಟ್ಟಿನಲ್ಲಿ ಪದ್ಮರಾಜ್ ರಂಥ ಸಮಾಜ ಸೇವಕರು ಉಚಿತ ನೋಟ್ ಬುಕ್ ವಿತರಣೆಯಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಬಹಳಷ್ಟು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದರು

ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಮಾತನಾಡಿ

ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಮಾತನಾಡಿ

ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಮಾತನಾಡಿ, ಬಹಳಷ್ಟು ಕುಟುಂಬಗಳು ತಮ್ಮ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಕೊಳ್ಳಲು ಸುಮಾರು ಒಂದು ವಾರಕ್ಕೂ ಹೆಚ್ಚಿನ ದುಡಿಮೆಯನ್ನು ಮೀಸಲಾಗಿಡಬೇಕಾದ ಪರಿಸ್ಥಿತಿ ಇದೆ. ಅಂತಹ ಬಡ ವಿದ್ಯಾರ್ಥಿಗಳ ಓದಿಗೆ ಯಾವುದೇ ತೊಂದರೆ ಆಗದಂತೆ ನೋಟ್ ಪುಸ್ತಕಗಳನ್ನು ನಿರಂತರವಾಗಿ 12 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವುದು ಬಹಳ ಶ್ಲಾಘನೀಯ ಎಂದರು.

 ಎಸ್.ಹೆಚ್.ಪದ್ಮರಾಜ್ ಮಾತನಾಡಿ

ಎಸ್.ಹೆಚ್.ಪದ್ಮರಾಜ್ ಮಾತನಾಡಿ

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಬಿಬಿಎಂಪಿ ಮಾಜಿ ಸದಸ್ಯ ಎಸ್.ಹೆಚ್.ಪದ್ಮರಾಜ್ ಮಾತನಾಡಿ, ಕಳೆದ 12 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ವಸ್ತುಗಳ ವಿತರಣೆಯನ್ನು ಮಾಡುತ್ತಾ ಬಂದಿದ್ದೇವೆ. ನಮ್ಮ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಕೈಲಾದ ಸಹಾಯವನ್ನು ಮಾಡುತ್ತಿದ್ದೇವೆ.

ಇನ್ನೂ ಹೆಚ್ಚಿನ ಸೇವೆಯನ್ನು ಮಾಡುವ ಉದ್ದೇಶ

ಇನ್ನೂ ಹೆಚ್ಚಿನ ಸೇವೆಯನ್ನು ಮಾಡುವ ಉದ್ದೇಶ

ಈ ಬಾರಿ 1 ಲಕ್ಷ ಉಚಿತ ನೋಟ್‍ಬುಕ್ ಗಳನ್ನು ಉಚಿತವಾಗಿ ವಿತರಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆಯನ್ನು ಮಾಡುವ ಉದ್ದೇಶವನ್ನು ಹೊಂದಲಾಗಿದೆ.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ವಿ.ಸೋಮಣ್ಣ, ಬಸವೇಶ್ವರ ನಗರ ವಾರ್ಡ್ ನ ಬಿಬಿಎಂಪಿ ಸದಸ್ಯೆ ಉಮಾವತಿ ಪದ್ಮರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+