ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆ

ಬೆಂಗಳೂರು, ಅಕ್ಟೋಬರ್ 27 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ. ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವಪುರ ವಾರ್ಡ್ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ವಿನೋದಾ ಮಂಗಳವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಕೋಣೆಯಲ್ಲಿ ಅವರು ನೇಣು ಹಾಕಿಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಭಟ್ಟರಹಳ್ಳಿಯಲ್ಲಿರುವ ಸತ್ಯಸಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿನೋದಾ ಅವರು ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕೆಲವು ತಿಂಗಳ ಹಿಂದೆ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆಗೆ ವಿನೋದಾ ಅವರು ಒಳಗಾಗಿದ್ದರು.

Former BBMP Corporator Wife Commits Suicide

ಜಯಪ್ರಕಾಶ್, ವಿನೋದಾ ದಂಪತಿಗೆ ಮೂರು ವರ್ಷದ ಮಗುವಿದೆ. ಬಿಬಿಎಂಪಿಯ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

ಕೆ. ಆರ್. ಪುರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+