ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 27 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ. ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವಪುರ ವಾರ್ಡ್ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ವಿನೋದಾ ಮಂಗಳವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಕೋಣೆಯಲ್ಲಿ ಅವರು ನೇಣು ಹಾಕಿಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಪೋಷಕರ ಕಣ್ಮುಂದೆಯೇ ಭೀಮಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿಪೋಷಕರ ಕಣ್ಮುಂದೆಯೇ ಭೀಮಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ

ಭಟ್ಟರಹಳ್ಳಿಯಲ್ಲಿರುವ ಸತ್ಯಸಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿನೋದಾ ಅವರು ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕೆಲವು ತಿಂಗಳ ಹಿಂದೆ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆಗೆ ವಿನೋದಾ ಅವರು ಒಳಗಾಗಿದ್ದರು.

 ಮಂಡ್ಯ; ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ನಾಲ್ವರಿಗೆ 5 ವರ್ಷ ಶಿಕ್ಷೆ ಮಂಡ್ಯ; ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ನಾಲ್ವರಿಗೆ 5 ವರ್ಷ ಶಿಕ್ಷೆ

Former BBMP Corporator Wife Commits Suicide

ಜಯಪ್ರಕಾಶ್, ವಿನೋದಾ ದಂಪತಿಗೆ ಮೂರು ವರ್ಷದ ಮಗುವಿದೆ. ಬಿಬಿಎಂಪಿಯ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

ದಾವಣಗೆರೆ: ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಶಿಕ್ಷಕಿ ಆತ್ಮಹತ್ಯೆದಾವಣಗೆರೆ: ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಶಿಕ್ಷಕಿ ಆತ್ಮಹತ್ಯೆ

Recommended Video

Munirathna : ನಮ್ ಅಮ್ಮ ಸತ್ತು 25 ವರುಷ ಆಗಿದೆ | Oneindia Kannada

ಕೆ. ಆರ್. ಪುರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

English summary
BBMP Basavapura ward former corporator wife committed suicide in Bengaluru. K. R. Puram police visited the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X