ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ಸಿನ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರು, ಏಪ್ರಿಲ್ 20: ಕಾಂಗ್ರೆಸ್ಸಿನ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ಬುಧವಾರ ರಾತ್ರಿ(ಏಪ್ರಿಲ್ 19) ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಜ್ಞ ವೈದ್ಯರಿಂದ ಮಾಜಿ ಮುಖ್ಯಮಂತ್ರಿ ಧರಂ ಅವರಿಗೆ ಚಿಕಿತ್ಸೆ ನಡೆಯುತ್ತಿದ್ದು, ಗಣ್ಯ ರಾಜಕಾರಣಿಗಳು ಅವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.

ಧರಂ ಸಿಂಗ್ 2013ರ ಮೇ ಮತ್ತು 2016ರ ಫೆಬ್ರವರಿಯಲ್ಲಿಯೂ ಉಸಿರಾಟದ ತೊಂದರೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.












Click it and Unblock the Notifications