ಹೈಕಮಾಂಡ್ ಫೋನ್ ಕರೆ: ಸದಾನಂದ ಗೌಡ ಕಾಂಗ್ರೆಸ್ ಸೇರಲ್ಲ
ಬೆಂಗಳೂರು, ಮಾರ್ಚ್ 20: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿ. ವಿ. ಸದಾನಂದ ಗೌಡರಿಗೆ ಈ ಬಾರಿಯ ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿದೆ. ಶೋಭಾ ಕರಂದ್ಲಾಜೆ ಪಕ್ಷದ ಈ ಬಾರಿ ಪಕ್ಷದ ಅಭ್ಯರ್ಥಿ.
ಬಿಜೆಪಿ ಟಿಕೆಟ್ ಕೈತಪ್ಪಿರುವ ಸದಾನಂದ ಗೌಡರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು. ಈ ಕುರಿತು ಬುಧವಾರ ಸ್ಪಷ್ಟನೆಯೊಂದನ್ನು ನೀಡಲಾಗಿದೆ. ಅಲ್ಲದೇ ಸದಾನಂದ ಗೌಡರು ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿ ರದ್ದುಗೊಳಿಸಲಾಗಿದೆ.

ಸ್ಪಷ್ಟನೆ ಏನು?; ಡಿ. ವಿ. ಸದಾನಂದ ಗೌಡರು ಕಾಂಗ್ರೆಸ್ ಸೇರುವುದಿಲ್ಲ ಎಂದು ಎಸ್. ಹರೀಶ್, ಜಿಲ್ಲಾಧ್ಯಕ್ಷರು, ಬೆಂಗಳೂರು ಉತ್ತರ ಪ್ರಕಟಣೆಯೊಂದನ್ನು ನೀಡಿದ್ದಾರೆ.
'ಮಾಧ್ಯಮಗಳಲ್ಲಿ ಬರುತ್ತಿರುವಂತೆ ನಮ್ಮ ಸದಾನಂದ ಗೌಡರು ಕಾಂಗ್ರೆಸ್ ಪಕ್ಷವನ್ನು ಸೇರುವುದು ಸತ್ಯಕ್ಕೆ ದೂರವಾದ ಮಾತು. ಸದಾನಂದ ಗೌಡರು ಶಿಸ್ತಿನ ಸಿಪಾಯಿ. ಸಂಘ ಪರಿವಾರದ ಸದಸ್ಯರು. ಅವರು ಕಾಂಗ್ರೆಸ್ ಇಂದ ಆಫರ್ ಬಂದಿದೆ ಎಂದಷ್ಟೇ ಹೇಳಿದ್ದು. ಆದರೆ ಸೇರುತ್ತೇನೆ ಎಂದು ಹೇಳಲೇ ಇಲ್ಲ' ಎಂದು ಹೇಳಿದ್ದಾರೆ.
'ಇದಕ್ಕೂ ಮೊದಲು ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ, ಮಾಧ್ಯಮದಲ್ಲಿ ಒಂದು ಮಾತು ಹೇಳಿದ್ದರು, ಹಾರಿಕೆ ಸುದ್ದಿ ಹರಡುವವರು ದೇಶದ್ರೋಹಿಗಳು ಎಂದು. ಈಗ ಅವರು ಕಾಂಗ್ರೆಸ್ ಸೇರಲಿದ್ದಾರೆ, ಎಂದು ಅಪ್ರಚಾರ ಮಾಡುವವರು ಈಗ ಸಾಲಿಗೆ ಸೇರುವವರು. ಮೋದಿ ಅಲೆಯನ್ನು ನೋಡಿ ಈಗಲೇ ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್ ನಾಯಕರು ಜನರ ಹಾದಿ ತಪ್ಪಿಸಲು ಈ ರೀತಿಯ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ' ಎಂದು ತಿಳಿಸಿದ್ದರು.
'ಸದಾನಂದ ಗೌಡರಂತೆ ನಿಷ್ಠಾವಂತ, ಶಿಸ್ತುಬದ್ದ ಕಾರ್ಯಕರ್ತ ಬಿಜೆಪಿಯಲ್ಲಿ ಯಾರು ಇಲ್ಲ. ಇವರೊಬ್ಬ ಸ್ಥಿತಪ್ರಜ್ಞ ರಾಜಕಾರಣಿ ಯಾವುದೇ ಕಾರಣಕ್ಕೂ ಅವರು ಕಾಂಗ್ರೆಸ್ ಸೇರಲಾರರು' ಎಂದು ಎಸ್. ಹರೀಶ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿ ರದ್ದು: ಮಂಗಳವಾರ ಡಿ. ವಿ. ಸದಾನಂದ ಗೌಡರು ಒಕ್ಕಲಿಗರ ಸಂಘದ ನಿರ್ದೇಶಕರು, ಪದಾಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದರು. ಬಳಿಕ ಬುಧವಾರ ಪತ್ರಿಕಾಗೋಷ್ಠಿ ನಡೆಸುವುದಾಗಿ ಹೇಳಿದ್ದರು. ಆದರೆ ಇಂದು ಪತ್ರಿಕಾಗೋಷ್ಠಿಯನ್ನು ದಿಢೀರ್ ರದ್ದುಗೊಳಿಸಲಾಗಿದೆ.
ಮಂಗಳವಾರ ರಾತ್ರಿ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೈತಪ್ಪಿರುವ ಸದಾನಂದ ಗೌಡರಿಗೆ ಹೈಕಮಾಂಡ್ ನಾಯಕರು ಕರೆ ಮಾಡಿದ್ದರು. ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ನೀಡುವ ಕುರಿತು ಭರವಸೆ ನೀಡಿದ್ದಾರೆ ಎಂಬ ಸುದ್ದಿ ಇದೆ.
ಇಂದು ಅಥವ ನಾಳೆ ಬಿಡುಗಡೆಯಾಗಲಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಸದಾನಂದ ಗೌಡರಿಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ನೀಡಲಾಗುತ್ತದೆ. ಈ ಕುರಿತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಸಹ ಸದಾನಂದ ಗೌಡರ ಜೊತೆ ಮಾತುಕತೆ ನಡೆಸಿದ್ದಾರೆ.
ಆದ್ದರಿಂದ ಸದಾನಂದ ಗೌಡರು ಇಂದು ಕರೆದಿದ್ದ ಪತ್ರಿಕಾಗೋಷ್ಠಿ ರದ್ದುಗೊಳಿಸಿದ್ದಾರೆ. ಮಂಗಳವಾರ ಸದಾನಂದ ಗೌಡರು ಕಾಂಗ್ರೆಸ್ ಸೇರಿ ಉಡುಪಿ-ಚಿಕ್ಕಮಗಳೂರು ಅಥವ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು.
ಚಿಕ್ಕಬಳ್ಳಾಪುರದ ಹಾಲಿ ಸಂಸದರು ಬಿ. ಎನ್. ಬಚ್ಚೇಗೌಡ. ಆದರೆ ಅವರು ಈ ಬಾರಿಯ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಈಗಾಗಲೇ ಅವರು, "ಬೇರೆ ರಾಜಕೀಯ ಪಕ್ಷ ಸೇರುವುದಿಲ್ಲ. ಚುನಾವಣಾ ರಾಜಕೀಯದಿಂದ ದೂರ ಇರುವೆ. ಆದರೆ ಸಕ್ರಿಯ ರಾಜಕಾರಣದಲ್ಲಿಯೇ ಇರುವೆ" ಎಂದು ಸ್ಪಷ್ಟಪಡಿಸಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಚಿಕ್ಕಬಳ್ಳಾಪುರಕ್ಕೆ ಅಭ್ಯರ್ಥಿ ಘೋಷಿಸಿಲ್ಲ. ಮಂಡ್ಯ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕಾರಣ ಸುಮಲತಾ ಚಿಕ್ಕಬಳ್ಳಾಪುರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಈ ಸುದ್ದಿಯನ್ನು ಅವರು ತಳ್ಳಿ ಹಾಕಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು











Click it and Unblock the Notifications