• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್‌ನಿಂದ ಮಾಜಿ ಶಾಸಕರ ಸಾವು: ಎಚ್‌ಡಿಕೆ ಸಂತಾಪ

|

ಬೆಂಗಳೂರು, ಸೆ. 03: ಕೊರೊನಾ ವೈರಸ್ ರಾಜ್ಯದಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದೆ. ಭದ್ರಾವತಿ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಅವರು ಕೋವಿಡ್-19 ಸೋಂಕಿ ತಗುಲಿದ್ದರಿಂದ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ (ಸೆ. 02) ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

   MJ Appaji Gowda JDS ಶಕ್ತಿ ಭದ್ರಾವತಿ ಶಾಸಕ ಇನ್ನಿಲ್ಲ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಜೆಡಿಎಸ್ ಮಾಜಿ ಶಾಸಕ ಅಪ್ಪಾಜಿಗೌಡ ನಿಧನಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಎಂ.ಜೆ. ಅಪ್ಪಾಜಿ (ಅಪ್ಪಾಜಿ ಗೌಡ) ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀರಾ ದು:ಖವಾಯಿತು.

   ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೋವಿಡ್‌ಗೆ ಬಲಿ

   ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‌ಡಿಕೆ ಸಂತಾಪ ಸೂಚಿಸಿದ್ದಾರೆ.

   ಉಕ್ಕಿನ ನಗರಿ ಭದ್ರಾವತಿಯ ಕಾರ್ಖಾನೆ ಕಾರ್ಮಿಕರ ಧ್ವನಿಯಾಗಿ ರಾಜಕೀಯ ಪ್ರವೇಶಿಸಿದ ಅಪ್ಪಾಜಿ ಗೌಡರ ನಿಧನ ಈ ನಾಡಿಗೆ ಮತ್ತು ಜೆಡಿಎಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

   ಸಿಎಂ ಬಿ.ಎಸ್. ಯಡಿಯೂರಪ್ಪ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಕೋವಿಡ್-19 ಸೋಂಕಿಗೆ ತುತ್ತಾಗಿ, ಸಂಪೂರ್ಣ ಗುಣಮುಖರಾಗಿದ್ದಾರೆ. ಆದರೆ ದುರದೃಷ್ಟವಶಾತ್ ರಾಜ್ಯದಲ್ಲಿ ಕೋವಿಡ್‌ಗೆ ಪ್ರಮುಖ ರಾಜಕಾರಣಿ ಬಲಿಯಾಗಿದ್ದಾರೆ.

   ರಾಜ್ಯದಲ್ಲಿ ಈವರೆಗೆ 5950 ಜನರು ಕೋವಿಡ್ 19ಗೆ ಬಲಿಯಾಗಿದ್ದಾರೆ. ಒಟ್ಟು 3,61,341 ಜನರು ಸೋಕಿಗೆ ತುತ್ತಾಗಿದ್ದು, 2,60,913 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಉಳಿದಂತೆ 94,459 ಸಕ್ರಿಯ ಸೋಂಕಿತರು ರಾಜ್ಯದಲ್ಲಿದ್ದಾರೆ.

   ಎಚ್‌.ಡಿ. ದೇವೇಗೌಡರ ಸಂತಾಪ: ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಂತಾಪ ಸೂಚಿಸಿದ್ದಾರೆ. ನಮ್ಮ ಪಕ್ಷದ ಹಿರಿಯ ಮುಖಂಡರು, ಮಾಜಿ ಶಾಸಕರು ಹಾಗೂ ನನ್ನ ಆತ್ಮೀಯರು ಆದ ಅಪ್ಪಾಜಿಗೌಡ ಅವರ ನಿಧನದ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವುಂಟಾಗಿದೆ. ನಮ್ಮ ಪಕ್ಷಕ್ಕೆ ಮತ್ತು ಶಿವಮೊಗ್ಗ ಜಿಲ್ಲೆಗೆ ತುಂಬಲಾಗದ ನಷ್ಟವುಂಟಾಗಿದೆ. ನಾವೆಲ್ಲ ಈ ದಿನ ಒಬ್ಬ ಧೈರ್ಯವಂತ ಧೀಮಂತ ನಾಯಕನನ್ನು ಕಳೆದುಕೊಂಡಿದ್ದೇವಿ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

   English summary
   Former CM H.D. Kumaraswamy expressed his condolences to Former MLA of Bhadravati Appaji Gowda death. HDK has condoled that God will grant peace to the soul of the dead and grant mercy to their families and fans.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X