'ಮಂತ್ರಿಗಳ ಮಾನಗೇಡಿ ಕೃತ್ಯ, ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಸಿಎಂ' ಹೆಚ್‌ಡಿಕೆ ಟ್ವೀಟ್
'ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ' ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರ ಪೆನ್‌ಡ್ರೈವ್ ವಿಚಾರವಾಗಿ ಆಡಳಿತ ಪಕ್ಷ ಮಾಡಿರುವ ಪ್ರತಿದಾಳಿಗಳಿಗೆ ಟ್ವಿಟ್ ಮೂಲಕ ಹೆಚ್‌ಡಿಕೆ ಉತ್ತರ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿರುದ್ಧ ದಾಳಿ ಮಾಡಿದ ಅವರು ಸರಣಿ ಟ್ವಿಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

'ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ' ಎಂದಿದ್ದಾರೆ.
'ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ 'ಎತ್ತುವಳಿ ಗಿರಾಕಿ'ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು' ಎಂದಿದ್ದಾರೆ.
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5#YstTax #CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023
'ನಿಮ್ಮ ಸಚಿವರ ವಿರುದ್ಧ ನಿಮ್ಮ @INCKarnataka ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ?' ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
'ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್'ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ 'ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ' ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ??' ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ. 2/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023
ಕುಮಾರಸ್ವಾಮಿ ಪೆನ್‌ಡ್ರೈವ್ ಆರೋಪ
ನನ್ನ ಬಳಿ ಇರುವ ಪೆನ್ ಡ್ರೈನಲ್ಲಿ ದಾಖಲೆ ಇವೆ, ಸರಿಯಾದ ಸಮಯಕ್ಕೆ ಬಿಡುಗಡೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಈ ಹಿಂದೆ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಸಹ ಕುಮಾರಸ್ವಾಮಿಗೆ ತಿರುಗೇಟು ನೀಡುತ್ತಿದ್ದಾರೆ. "ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ HDK ಯವರ ನಿದ್ರೆ, ನೆಮ್ಮದಿ ಹಾರಿ ಹೋಗಿದೆ. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ HDK ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ" ಎಂದು ಸಚಿವ ದಿನೇಶ್ ಗಂಡೂರಾವ್ ದೂರಿದ್ದರು.
ಕುಮಾರಸ್ವಾಮಿ ಪೆನ್‌ಡ್ರೈವ್ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಹ ತಿರುಗೇಟು ನೀಡಿದ್ದರು.












Click it and Unblock the Notifications