ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಎಸ್‌ವೈ ಅಭಿನಂದನಾ ಸಮಾರಂಭದಲ್ಲಿ ಎಚ್‌ಡಿಕೆ ಭಾಗವಹಿಸುತ್ತಿಲ್ಲ ಯಾಕೆ?

|
Google Oneindia Kannada News

ಬೆಂಗಳೂರು, ಫೆ. 27: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭಾಗವಹಿಸುತ್ತಿಲ್ಲ.

Recommended Video

ಬೆಂಗಳೂರು ಅಂತರ ರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆ ಕೊಟ್ಟ ಸಿಎಂ ಹಾಗು ಯಶ್ |

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಸಿಎಂ ಯಡಿಯೂರಪ್ಪ ಅವರ 'ದಣಿವರಿಯದ ಧೀಮಂತ' ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಿಎಂ ಭಾಗವಹಿಸಿ, ಯಡಿಯೂರಪ್ಪ ಅವರ ಕಿರಿತು ತಯಾರಿಸಲಾಗಿರುವ ಸಾಕ್ಷ್ಯಚಿತ್ರ ಬಿಡುಗಡೆ ಮಾಡಬೇಕಾಗಿತ್ತು. ಜೊತೆಗೆ ಸಿಎಂ ಪುತ್ರ, ರಾಜ್ಯ ಬಿಜೆಪಿ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಅವರೇ ಖುದ್ದಾಗಿ ಹೋಗಿ ಎಚ್‌ಡಿಕೆ ಅವರನ್ನು ಆಹ್ವಾನಿಸಿ, ಸಾಕ್ಷ್ಯಚಿತ್ರ ಬಿಡುಗಡೆಗೆ ಒಪ್ಪಿಸಿ ಬಂದಿದ್ದರು. ಆದರೆ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಸಮಾರಂಭದಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಸಿಎಂ ಯಡಿಯೂರಪ್ಪ ಅವರಿಗೆ 78ನೇ ಹುಟ್ಟುಹಬ್ಬದ ಸಂಭ್ರಮ, ಶುಭಕೋರಿದ ಪ್ರಧಾನಿಸಿಎಂ ಯಡಿಯೂರಪ್ಪ ಅವರಿಗೆ 78ನೇ ಹುಟ್ಟುಹಬ್ಬದ ಸಂಭ್ರಮ, ಶುಭಕೋರಿದ ಪ್ರಧಾನಿ

ಪೂರ್ವ ನಿಗದಿತ ಕಾರ್ಯಕ್ರಮದಿಂದ ಭಾಗವಹಿಸಲು ಆಗುತ್ತಿಲ್ಲ: 78ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಹೋರಾಟದ ಮೂಲಕವೇ ರಾಜಕೀಯ ನೆಲೆಕಂಡುಕೊಂಡು ಉನ್ನತ ಸ್ಥಾನಕ್ಕೇರಿರುವ ತಮಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು.

Former CM HDK said he was unable to attend Yeddyurappas congratulatory ceremony

ವಯಸ್ಸು 77 ಆದರೂ, ಈಗಲೂ 18ರ ಯುವಕನಂತೆ ಚೈತನ್ಯದ ಚಿಲುಮೆಯಾಗಿ ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಮ್ಮ ಗುರಿ ಈಡೇರಲೆಂದು ಹಾರೈಸುತ್ತೇನೆ. ಈ ಶುಭ ಸಂದರ್ಭದಲ್ಲಿ ತಾವು ನೂರ್ಕಾಲ ಬಾಳಿ, ಇನ್ನೂ ಹೆಚ್ಚಿನ ಉನ್ನತ ಸ್ಥಾನಕ್ಕೇರಲಿ ಎಂದು ಆಶಿಸುತ್ತೇನೆ ಎಂದು ಎಚ್‌ಡಿಕೆ ಶುಭಹಾರೈಸಿದ್ದಾರೆ.

ಅಪ್ಪನಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ ವಿಜಯೇಂದ್ರಅಪ್ಪನಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ ವಿಜಯೇಂದ್ರ

ನಿಮ್ಮ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಂಡಿರುವ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂಬ ಅಪೇಕ್ಷೆ ಇತ್ತು. ಆದರೆ, ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ಭಾಗಿಯಾಬೇಕಾದ ಅನಿವಾರ್ಯತೆಯಿಂದಾಗಿ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಪತ್ರದಲ್ಲಿ ಎಚ್ಡಿಕೆ ಹೇಳಿದ್ದಾರೆ.

English summary
Former CM Kumaraswamy said he was unable to attend Yeddyurappa's congratulatory ceremony as there was a pre-scheduled event. CM Yeddyurappa wrote a letter and wished him a happy birthday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X