ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು: ಕುಮಾರಸ್ವಾಮಿ ವಿರೋಧ

|
Google Oneindia Kannada News

ಬೆಂಗಳೂರು, ಮೇ 27: ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರನ್ನು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅದನ್ನು ವಿರೋಧ ಮಾಡಿದ್ದಾರೆ.

''ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು.'' ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ಯಾಕೇಜ್ ಟೀಕೆಸಿದ್ರೆ ದೇಶದ್ರೋಹಿಗಳಂತೆ ಬಿಂಬಿಸುತ್ತಾರೆ- ಕುಮಾರಸ್ವಾಮಿ ಪ್ಯಾಕೇಜ್ ಟೀಕೆಸಿದ್ರೆ ದೇಶದ್ರೋಹಿಗಳಂತೆ ಬಿಂಬಿಸುತ್ತಾರೆ- ಕುಮಾರಸ್ವಾಮಿ

''ಸ್ವಾತಂತ್ರ್ಯಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿಗೆ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನು ಈ ಮೇಲ್ಸೇತುವೆಗೆ ಇಡಬಹುದಿತ್ತು. ರಾಜ್ಯದ ಹೋರಾಟಗಾರರ ಹೆಸರನ್ನು ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ? ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆಯ ಪರವಾಗಿ ಆಗ್ರಹ ಪಡಿಸುತ್ತೇನೆ.'' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Former CM Kumaraswamy Opposes Veera Savarkar Name To Yelahanka Flyover

ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ''ಯಲಹಂಕ‌ ಮೇಲ್ಸೆತುವೆಗೆ ವಿ.ಡಿ.ಸಾವರ್ಕರ್ ಹೆಸರಿಡುವ ರಾಜ್ಯ ಸರ್ಕಾರದ ನಿರ್ಧಾರ ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಅವಮಾನ. ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ರಾಜ್ಯದ ಸ್ವಾತಂತ್ರ್ಯಹೋರಾಟಗಾರರೊಬ್ಬರ ಹೆಸರಿಡಬೇಕೆಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸುತ್ತೇನೆ.'' ಎಂದಿದ್ದಾರೆ.

''ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ತೆರೆ ಹಿಂದಿನ‌ ಸೂತ್ರಧಾರರೇ ಹೊರತು, ಚುನಾಯಿತ ಸರ್ಕಾರ ಅಲ್ಲ‌ ಎನ್ನುವುದಕ್ಕೆ ಯಲಹಂಕ ಮೇಲ್ಸೆತುವೆಗೆ ಸಾವರ್ಕರ್ ಹೆಸರಿಡುವ ಅವಸರದ ನಿರ್ಧಾರವೇ‌ ಪುರಾವೆ.' ಎಂದು ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Former CM of karnataka Kumaraswamy opposes Veera Savrkar name to yalahanka flyove.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X