ರಕ್ಷಣೆ ಕೋರಿ ಸಿಡಿ ಯುವತಿ ವಿಡಿಯೋ ಬಿಡುಗಡೆ: ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 25: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ಥ ಯುವತಿಯು ಗುರುವಾರ ಬಿಡುಗಡೆ ಮಾಡಿದ 2ನೇ ವಿಡಿಯೋದಲ್ಲಿ ತನಗೆ ಹಾಗೂ ತನ್ನ ಕುಟುಂಬಕ್ಕೆ ರಕ್ಷಣೆ ಕೋರಿದ್ದಾಳೆ.

ವಿಡಿಯೋದಲ್ಲಿ ಸಿಡಿ ಪ್ರಕರಣದ ಯುವತಿ ತನಗೆ ರಕ್ಷಣೆ ನೀಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಕೇಳಿಕೊಂಡಿದ್ದಳು.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Former CM Siddaramaiah Has Expressed Outrage Against The State Govt Through A Series Of Tweets

"ಯುವತಿಯು ತನ್ನ ಕುಟುಂಬಕ್ಕೆ ಮತ್ತು ತನಗೆ ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಾಳೆ. ಆದರೆ, ಪೊಲೀಸ್ ಇಲಾಖೆಯ ವೈಫಲ್ಯ ಮತ್ತು ಸಂತ್ರಸ್ಥ ಯುವತಿಯ ಬಗ್ಗೆ ಪೂರ್ವಾಗ್ರಹ ಪೀಡಿತದಿಂದ ರಕ್ಷಣೆ ನೀಡಿಲ್ಲ'' ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಸಿಡಿ ಸಂತ್ರಸ್ಥ ಯುವತಿಗೆ ಸಂಪೂರ್ಣ ರಕ್ಷಣೆ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Former CM Siddaramaiah Has Expressed Outrage Against The State Govt Through A Series Of Tweets

ಪೊಲೀಸ್ ಆಯುಕ್ತರಿಗೆ ಕಳುಹಿಸಿದ ಸಿಡಿ ಮಾಧ್ಯಮಗಳಿಗೆ ಸೋರಿಕೆಯಾಗಿದೆ ಎಂದು ಸಂತ್ರಸ್ಥೆ ಗಂಭೀರ ಆರೋಪ ಮಾಡಿದ್ದಾರೆ. ಇದು ಎಸ್‌ಐಟಿಯ ಕಾರ್ಯವೈಖರಿಯ ಬಗ್ಗೆ ಗಂಭೀರ ಅನುಮಾನಗಳನ್ನು ಮತ್ತು ಕಳವಳವನ್ನು ಉಂಟುಮಾಡುತ್ತದೆ ಎಂದು ಆರೋಪಿಸಿದರು.

ಸಿಡಿ ಪ್ರಕರಣದ ತನಿಖೆಯನ್ನು ಪೊಲೀಸ್ ಇಲಾಖೆಯು ಪ್ರಾರಂಭಿಸಿದಾಗಿನಿಂದ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಿಸದಿರುವುದು ನಿರ್ಭಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲಂಘಿಸಿದೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+