ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ವಾಸ್ತವ ಲೆಕ್ಕ ಮುಂದೆ ಇಟ್ಟು ಸರ್ಕಾರಕ್ಕೆ ಛಾಟಿ ಬೀಸಿದ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಮಾರ್ಚ್ 27: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ ಮತ್ತು ಬಿಜೆಪಿ ರಾಜ್ಯದ ಜನರಿಗೆ ತಪ್ಪು ಲೆಕ್ಕಗಳನ್ನು ನೀಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಟ್ವೀಟ್ ಮೂಲಕ ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, "ರಾಜ್ಯದ ಆರೋಗ್ಯ ಇಲಾಖೆ ದಾಖಲೆ ಪ್ರಕಾರ 2020ರ ಡಿಸೆಂಬರ್ ವರೆಗಿನ ಕೊರೊನಾ ಸಾವಿನ ಸಂಖ್ಯೆ- 12,090. ಆದರೆ ರಾಜ್ಯ ಯೋಜನಾ ಮತ್ತು ಅಂಕಿಅಂಶ ಇಲಾಖೆಯ ಪ್ರಕಾರ ಇದೇ ಅವಧಿಯಲ್ಲಿ ಕೊರೊನಾ ಸಾವಿನ ಸಂಖ್ಯೆ- 22,320" ಎಂದು ಹೇಳಿ, ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ಕೆ.ಸುಧಾಕರ್ ಅವರನ್ನು ಟ್ಯಾಗ್ ಮಾಡಿದ್ದಾರೆ.

Former CM Siddaramaiah Serious Allegation On Karnataka Health Department

"ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು? ಕೊರೊನಾ ಉಲ್ಭಣಕ್ಕೆ ಬಿಜೆಪಿ ಸರ್ಕಾರದ ಅಸಾಮರ್ಥ್ಯ, ಭ್ರಷ್ಟಾಚಾರ ಹಾಗೂ ಸುಳ್ಳುಗಳು ಕಾರಣ ಎಂದು ಮೊದಲ ದಿನದಿಂದ ಹೇಳುತ್ತಾ ಬಂದಿದ್ದೇನೆ. ತಪ್ಪನ್ನು ತಿದ್ದಿಕೊಳ್ಳದೆ ಎಲ್ಲವನ್ನು ಸಮರ್ಥಿಸಿಕೊಂಡ ಸರ್ಕಾರದ ಲಜ್ಜೆಗೇಡಿತನದ ಫಲವನ್ನು ರಾಜ್ಯದ ಜನ ಅನುಭವಿಸಬೇಕಾಗಿದೆ" ಎಂದು ಕಿಡಿಕಾರಿದ್ದಾರೆ.

ಬಿಜೆಪಿ ನಾಯಕರು ಕೇವಲ ಕೋವಿಡ್-19 ಸಂಬಂಧಿತ ಸಾವುಗಳ ಬಗ್ಗೆ ಸುಳ್ಳು ಹೇಳಿಲ್ಲ, ಅವರು ಔಷಧಿಗಳು, ಮಾಸ್ಕ್ ಗಳು, ಸ್ಯಾನಿಟೈಜರ್, ಪಿಪಿಇ ಕಿಟ್‌ಗಳು ಮತ್ತು ಇತರ ಖರೀದಿಗಳ ಬಗ್ಗೆಯೂ ಸುಳ್ಳು ಹೇಳಿದ್ದಾರೆ. ಆರೋಗ್ಯ ಸಚಿವ ಸುಧಾಕರ್ ಅವರ ಭ್ರಷ್ಟಾಚಾರ ಮತ್ತು ಅದಕ್ಷತೆಯನ್ನು ಮರೆಮಾಡಲು ನಿರಂತರವಾಗಿ ಸುಳ್ಳು ಹೇಳಲಾಗುತ್ತಿದೆ ಎಂದು ಟೀಕಿಸಿದರು.

Former CM Siddaramaiah Serious Allegation On Karnataka Health Department


ಕೊರೊನಾ ಸೋಂಕು, ಸಾವು, ಚಿಕಿತ್ಸೆ ಮತ್ತು ನೊಂದ ಕುಟುಂಬಗಳಿಗೆ ನೀಡಿರುವ ಪರಿಹಾರದ ಬಗ್ಗೆ ರಾಜ್ಯದ ಬಿಜೆಪಿ ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಿ ನಿಜಸಂಗತಿಯನ್ನು ರಾಜ್ಯದ ಜನತೆಗೆ ತಿಳಿಸಬೇಕು. ಕೊರೊನಾವನ್ನು ಔಷಧಿ-ಚಿಕಿತ್ಸೆಯಿಂದ ಗೆಲ್ಲಬೇಕೇ ಹೊರತು ಸುಳ್ಳುಗಳಿಂದಲ್ಲ ಎಂದು ಛೇಡಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯನವರ ಟ್ವೀಟ್ಟರ್ ನಲ್ಲಿ ಕೇಳಲಾದ ಪ್ರಶ್ನೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, "ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶಗಳನ್ನು ಮುಚ್ಚಿಡುವ ಉದ್ದೇಶವೂ ಇಲ್ಲ, ಅದರ ಅವಶ್ಯಕತೆಯೂ ಇಲ್ಲ. ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಕೇವಲ ರಾಜಕೀಯ ಲಾಭಕ್ಕಾಗಿ ಸುಳ್ಳು ಅಪಾದನೆಗಳನ್ನು ಮಾಡುವುದು ಸರಿಯಲ್ಲ. ಇದು ಕಳೆದ 1 ವರ್ಷದಿಂದ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ಯೋಧರಿಗೆ ಎಸಗಿರುವ ಅಪಮಾನ" ಎಂದು ತಿಳಿಸಿದ್ದಾರೆ.

Former CM Siddaramaiah Serious Allegation On Karnataka Health Department

Recommended Video

DK ಶಿವಕುಮಾರ್ ಹೆಸರು ಹೇಳಿದ ಸಿಡಿ ಲೇಡಿ | Oneindia Kannada

ಈ ಅಂಕಿ-ಅಂಶಗಳು ಇ-ಜನ್ಮ ತಂತ್ರಾಂಶದಲ್ಲಿ ತಾತ್ಕಾಲಿಕವಾಗಿ ದಾಖಲಿಸಲಾಗಿರುವ ದತ್ತಾಂಶವಾಗಿದ್ದು, ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಅವರು ಹೊರಡಿಸಿರುವ ಮಾರ್ಗಸೂಚಿಗಳ ಅನುಸಾರ ಪರಿಷ್ಕರಣೆ ನಡೆಯಬೇಕಿದೆ. ಈ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು, ಅಂತಿಮ ಅಂಕಿ-ಅಂಶಗಳ ಪ್ರಕಟಣೆ ಇನ್ನೂ ಬಾಕಿಯಿದೆ ಎಂದು ಆರೋಗ್ಯ ಸಚಿವ ಸಮರ್ಥಿಸಿಕೊಂಡಿದ್ದಾರೆ.

English summary
Former CM Siddaramaiah accused the state government and the BJP of misrepresenting statistics to the people of the state over coronavirus cases in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X