• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

|

ಬೆಂಗಳೂರು, ಆ. 13: ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

   ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿಹೋಗಿದೆ | Oneindia Kannada

   In Pics: ಆಸ್ಪತ್ರೆಯಿಂದ ಡಿಸ್ಚಾರ್ಜ್, ಕೊವಿಡ್ 19 ಗೆದ್ದ ಸಿದ್ದರಾಮಯ್ಯ

   ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆದ ಬಳಿಕ ಶಿವಾನಂದ ವೃತ್ತದ ಬಳಿಯಿರುವ ಸರ್ಕಾರಿ ನಿವಾಸಕ್ಕೆ ಸಿದ್ದರಾಮಯ್ಯ ಅವರು ಆಗಮಿಸಿದರು. ಸಿದ್ದರಾಮಯ್ಯ ಅವರೊಂದಿಗೆ ಪುತ್ರ ಡಾ. ಯತೀಂದ್ರ ಅವರೂ ಮನೆಗೆ ಆಗಮಿಸಿದರು. ಡಾ. ಯತೀಂದ್ರ ಅವರ ಎರಡನೇ ಪರೀಕ್ಷಾ ವರದಿ ಕೂಡ ನೆಗಟಿವ್ ಬಂದಿದೆ.

   'ಹತ್ತು ದಿನ ಯಾರೂ ನನ್ನ ಭೇಟಿಗೆ ಬರಬೇಡಿ'

   ಎರಡನೇ ಬಾರಿಗೆ ನಡೆದ ಪರೀಕ್ಷೆಯಲ್ಲೂ ಸಿದ್ದರಾಮಯ್ಯ ಅವರ ವರದಿಯಲ್ಲಿ ನೆಗೆಟಿವ್ ಬಂದಿದ್ದು ಅವರನ್ನು ಆಸ್ಪತ್ತೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಮೂತ್ರದ ಸೋಂಕಿನ ಹಿನ್ನೆಲೆಯಲ್ಲಿ ಆಗಸ್ಟ್ 3 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು.

   ಕಳೆದ ಹತ್ತು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು, ಸಿಬ್ಬಂದಿಗೆ ಸಿದ್ದರಾಮಯ್ಯ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಗುಣಮುಖರಾಗುವಂತೆ ತಮಗೆ ಹಾರೈಸಿದ ನಾಡಿನ ಜನತೆ ಸೇರಿದಂತೆ ಎಲ್ಲರಿಗೂ ಸಿದ್ದರಾಮಯ್ಯ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

   ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಮನೆಯಲ್ಲಿ ಒಂದು ವಾರ ವಿಶ್ರಾಂತಿ ಪಡೆಯಲಿದ್ದಾರೆ.

   English summary
   Siddaramaiah, the Leader of the Opposition in the Legislative Assembly, who was admitted to the Manipal Hospital in the wake of the coronavirus infection s now recovered. Doctors at Manipal Hospital told them that Covid was negative in the throat fluid and blood test conducted for the second time. So Siddaramaiah dicharged from hospital today.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X