ನೆ.ಲ ನರೇಂದ್ರ ಬಾಬು ಬಿಜೆಪಿ ಸೇರುವುದು ಖಚಿತ
ಬೆಂಗಳೂರು, ಸೆ. 21:ಕಾಂಗ್ರೆಸ್ಸಿನ ಮಾಜಿ ಶಾಸಕ ನೆ. ಲ ನರೇಂದ್ರ ಬಾಬು ಅವರು ಬಿಜೆಪಿ ಸೇರುತ್ತಿರುವುದನ್ನು ಖಚಿತ ಪಡಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ನಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಕಾಂಗ್ರೆಸ್ಸಿನಲ್ಲಿ ನಾನು ಅಧಿಕಾರದಿಂದ ವಂಚಿತನಾಗಿದ್ದೇನೆ, ಸಂಪೂರ್ಣವಾಗಿ ಕಾಂಗ್ರೆಸ್ ಸಖ್ಯ ತೊರೆದು ಬಿಜೆಪಿ ಸೇರುತ್ತಿದ್ದೇನೆ ಎಂದರು.ಕಾಮಾಕ್ಷಿಪಾಳ್ಯದ ಕಾಂಗ್ರೆಸ್ ಮುಖಂಡರಾದ ಸಿ.ರಾಜಣ್ಣ ಅವರು ಕೂಡ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಮಹಾಲಕ್ಷ್ಮಿ ಲೇಔಟ್ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ 2008ರಲ್ಲಿ ಗೆಲುವು ಸಾಧಿಸಿದ್ದರು. ಆದರೆ, 2013ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ನ ಗೋಪಾಲಯ್ಯ ವಿರುದ್ಧ ಸೋಲನುಭವಿಸಿದ್ದರು. ಕಾಂಗ್ರೆಸ್ ಇವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿತ್ತು.
ಕಳೆದ ಆರು ತಿಂಗಳ ಹಿಂದೆ ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ, ಹಿಂದುಳಿದ ವರ್ಗದ ಮುಖಂಡ ಎಂ.ನಾಗರಾಜ್ ಅವರು ಬಿಜೆಪಿ ಸೇರಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಬಳಿಕ ಈ ಬೆಳವಣಿಗೆ ಈ ಭಾಗದಲ್ಲಿ ನಡೆದಿದೆ. ಎಸ್.ಹರೀಶ್ ಇಲ್ಲಿನ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ












Click it and Unblock the Notifications