ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ಮುಖಂಡರ ವಾಗ್ಝರಿಗೆ ಎಚ್‌ಎಂ ರೇವಣ್ಣ ಆಕ್ರೋಶ

|
Google Oneindia Kannada News

ಬೆಂಗಳೂರು, ಜನವರಿ 8: ಜೆಡಿಎಸ್ ಮುಖಂಡರ ವಾಗ್ಝರಿಗೆ ಕಾಂಗ್ರೆಸ್ ಹಿರಿಯ ಮುಖಂಡ ಎಚ್‌ಎಂ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್‌ಡಿ ರೇವಣ್ಣ ಏನೂಸೂಪರ್ ಸಿಎಂ ಅಲ್ಲ ಪರಿಸ್ಥಿತಿ ಮತ್ತು ಮಿತಿಯನ್ನು ಅರಿತು ಮಾತನಾಡಬೇಕು ಎಂದರು.

ನಿಗಮ-ಮಂಡಳಿಗಳ ನೇಮಕದಲ್ಲಿ ನನ್ನ ಹಸ್ತಕ್ಷೇಪವಿಲ್ಲ: ಎಚ್‌ಡಿ ರೇವಣ್ಣನಿಗಮ-ಮಂಡಳಿಗಳ ನೇಮಕದಲ್ಲಿ ನನ್ನ ಹಸ್ತಕ್ಷೇಪವಿಲ್ಲ: ಎಚ್‌ಡಿ ರೇವಣ್ಣ

ಕಳೆದ ಹದಿನೈದು ದಿನಗಳಿಂದ ಜನತಾದಳದ ಎಲ್ಲರೂ ಮಾತನಾಡಲು ಪ್ರಾರಂಭಿಸಿದ್ದಾರೆ ಎಂದು ಮಾಜಿ ಸಚಿವ ಎಚ್​.ಎಂ.ರೇವಣ್ಣ ಅವರು ದೋಸ್ತಿ ಪಕ್ಷದ ನಡೆಯನ್ನು ಟೀಕಿಸಿದ್ದಾರೆ.ಎಚ್. ಡಿ.ರೇವಣ್ಣ ಸೂಪರ್ ಸಿಎಂ ಏನಲ್ಲ? ಅವರು ಅರಿತು ಮಾತನಾಡಬೇಕು ಎಂದು ಹೇಳುವ ಮೂಲಕ ಕಾಂಗ್ರೆಸ್​​ನವರು ಒತ್ತಡ ಹಾಕಿದರೆ ನಮ್ಮ ದಾರಿ ನಮಗೆ ಎಂದಿದ್ದ ಎಚ್​.ಡಿ. ರೇವಣ್ಣ ಹೇಳಿಕೆಗೆ ತಿರುಗೇಟು ನೀಡಿದರು.

Former minister HM Revanna shows his anger over JDS

ಕೋಮುವಾದಿ ಬಿಜೆಪಿಯನ್ನು ದೂರ ಇಡಲು ಜೆಡಿಎಸ್​ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಜೆಡಿಎಸ್​ ಮತ್ತು ಕಾಂಗ್ರೆಸ್​ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇಂದು ರಾಜ್ಯದ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ ಬರುತ್ತಾರೆ. ಅವರೊಂದಿಗೆ ಚರ್ಚೆ ಮಾಡಿ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ರೇವಣ್ಣ-ದಿನೇಶ್ ಗುಂಡೂರಾವ್ ನಡುವೆ ಮಾತಿನ ಸಮರರೇವಣ್ಣ-ದಿನೇಶ್ ಗುಂಡೂರಾವ್ ನಡುವೆ ಮಾತಿನ ಸಮರ

ನಮ್ಮಲ್ಲಿ ಹೈಕಮಾಂಡ್ ಸಂಸ್ಕೃತಿ ಇರುವುದರಿಂದ ಅವರ ನಿರ್ದೇಶನದಂತೆ ಕೋಮುವಾದಿ ಬಿಜೆಪಿ ಪಕ್ಷವನ್ನು ದೂರ ಇಡುವುದಕ್ಕಾಗಿ ಜೆಡಿಎಸ್​ ಜತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಆದರೆ, ಇದೀಗ ಅವರ ಪಕ್ಷದಲ್ಲಿ ಎಲ್ಲರೂ ಮಾತನಾಡಲು ಶುರು ಮಾಡಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇಬ್ಬರೂ ಚರ್ಚೆ ಮಾಡಿಯೇ ನಿಗಮ ಮಂಡಳಿಯನ್ನು ನೇಮಕ ಮಾಡಲಾಗಿದೆ. ರಾಹುಲ್ ಗಾಂಧಿ ಅವರ ತೀರ್ಮಾನದಂತೆ ಪಟ್ಟಿ ಕೊಟ್ಟಿದ್ದೆವು. ಅದಕ್ಕೆ ಸಮ್ಮತಿ ಕೊಡಬೇಕಾಗಿದ್ದು ಮೈತ್ರಿ ಧರ್ಮ. ನಮ್ಮಲ್ಲಿ ಸಣ್ಣ-ಪುಟ್ಟ ಸಮಸ್ಯೆಗಳಿವೆ ಎಂದು ಹೇಳಿದರು.

English summary
Former minister HM Revanna express his anger over JDS leaders comment. He clarified that HD Revanna is not super CM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X