ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ಆಸ್ಪತ್ರೆಗೆ ದಾಖಲು

ಬೆಂಗಳೂರು, ನವೆಂಬರ್ 23 : ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಸಿ.ಕೆ.ಜಾಫರ್ ಷರೀಫ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ.

ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸಿ.ಕೆ.ಜಾಫರ್ ಷರೀಫ್ (85) ಅವರನ್ನು ದಾಖಲು ಮಾಡಲಾಗಿದೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Former minister Jaffer Sharief admitted to hospital

ಸಿ.ಕೆ.ಜಾಫರ್ ಷರೀಫ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಹಲವು ನಾಯಕರು ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ.

ಜಾಫರ್ ಷರೀಫ್ ಅವರು ಮೌಲಾನಾ ಅಬ್ದುಲ್ ಕಲಾಮ್ ಆಝಾದ್ ಅವರ 'ಇಂಡಿಯಾ ವಿನ್ಸ್ ಫ್ರೀಡಂ' ಪುಸ್ತಕವನ್ನು ಉರ್ದು ಭಾಷೆಗೆ ಅನುವಾದ ಮಾಡಿಸಿದ್ದಾರೆ. ಈ ಪುಸ್ತಕ ಬಿಡುಗಡೆ ಸಮಾರಂಭ ನವೆಂಬರ್ 28ರಂದು ಅರಮನೆ ಮೈದಾನದಲ್ಲಿ ನಡೆಯಲಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಜಾಫರ್ ಷರೀಫ್ ಅವರ ಅನಾರೋಗ್ಯದ ಕಾರಣದಿಂದಾಗಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗುತ್ತದೆಯೇ? ಎಂಬ ಪ್ರಶ್ನೆ ಎದ್ದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+