ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ತೊರೆದ ಮಾಜಿ ಸಚಿವ ಕುಮಾರ ಬಂಗಾರಪ್ಪ

ಮಾಜಿ ಸಚಿವ ಕುಮಾರ ಬಂಗಾರಪ್ಪ ಕಾಂಗ್ರೆಸ್ ತೊರೆದಿದ್ದಾರೆ. ಅವರು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಬಹಳ ದಿನದಿಂದ ಹರಿದಾಡುತ್ತಿತ್ತು. ಶುಕ್ರವಾರ ಪತ್ರಿಕಾಗೋಷ್ಠಿ ಮಾಡಿ, ಕಾಂಗ್ರೆಸ್ ತೊರೆಯುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ

|
Google Oneindia Kannada News

ಬೆಂಗಳೂರು, ಮಾರ್ಚ್ 3: ಕಾಂಗ್ರೆಸ್ ಪಕ್ಷ ತೊರೆದಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಈ ವೇಳೆ ಸಚಿವರಾದ ಕಾಗೋಡು ತಿಮ್ಮಪ್ಪ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕುಮಾರ ಬಂಗಾರಪ್ಪ ಬಿಜೆಪಿ ಸೇರುವ ಬಗ್ಗೆ ಸುದ್ದಿ ದಟ್ಟವಾಗಿ ಹಬ್ಬಿತ್ತು. ಈ ಬಗ್ಗೆ ಪ್ರಶ್ನಿಸಿದಾಗೆಲ್ಲ, "ಯಾವುದೇ ನಿರ್ಧಾರ ಅಂತಿಮವಾಗಿಲ್ಲ" ಎಂದು ಅವರು ಹೇಳುತ್ತಿದ್ದರು. ಅದರೆ ಈಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಜನ್ಮದಿನದಂದು ಅವರಿಗೆ ಶುಭ ಕೋರಿದ್ದ ಕುಮಾರ ಬಂಗಾರಪ್ಪ, ಬಿಎಸ್ ವೈ ಅವರನ್ನು ಹೊಗಳಿದ್ದರು.[ಕುಮಾರ ಬಂಗಾರಪ್ಪ ಜತೆ ಒನ್ಇಂಡಿಯಾ ಕನ್ನಡ ವಿಶೇಷ ಸಂದರ್ಶನ]

Former minister Kumar Bangarappa quits Congress party

ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನ ಬಿಡುವಂತೆ ಸಲಹೆ ನೀಡಿದ್ದಾರೆ. ಆದರೆ ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದೇನೆ. ಏಕೆಂದರೆ, ಕೆಲವು ನಿರ್ಧಾರಗಳನ್ನು ಭಾವನಾತ್ಮಕವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಒನ್ ಇಂಡಿಯಾ ಕನ್ನಡಕ್ಕೆ ನೀಡಿದ ಸಂದರ್ಶನದ ವೇಳೆ ಅವರು ಹೇಳಿದ್ದರು. ಇದೀಗ ಕುಮಾರ್ ಕಾಂಗ್ರೆಸ್ ತೊರೆದಿದ್ದು, ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ.[ಕುಮಾರ್ ಅಂಬುಲೆನ್ಸ್, ವೈದ್ಯರ ಜೊತೆ ಬಿಜೆಪಿಗೆ ಸೇರಲಿ, ಮಧು ಬಂಗಾರಪ್ಪ]

ಶ್ರೀನಿವಾಸ್ ಪ್ರಸಾದ್, ಎಸ್ಸೆಂ ಕೃಷ್ಣ ನಂತರ ಹಿಂದುಳಿದ ವರ್ಗದ ಪ್ರಮುಖ ನಾಯಕರೊಬ್ಬರು ಕಾಂಗ್ರೆಸ್ ತೊರೆಯುತ್ತಿರುವುದು ಪಕ್ಷದ ಪಾಲಿಗೆ ಹಿನ್ನಡೆ ಎಂಬಂತೆ ಆಗಿದೆ.

ಪರಮೇಶ್ವರ ಪ್ರತಿಕ್ರಿಯೆ: ಕುಮಾರ ಬಂಗಾರಪ್ಪ ಕಾಂಗ್ರೆಸ್ ತೊರೆದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಪಕ್ಷ ಬಿಡುವವರು ಇರಬಹುದು. ಆದರೆ ಇತರ ಪಕ್ಷಗಳಿಂದ ಕಾಂಗ್ರೆಸ್ ಗೆ ಬರುವವರ ಸಂಖ್ಯೆಯೂ ದೊಡ್ಡದಿದೆ ಎಂದಿದ್ದಾರೆ.

English summary
Former Karnataka Minister Kumar Bangarappa quits Indian National Congress. He submitted papers to KPCC President Dr G Parameshwara.Kumar was slowly bidding good bye to Congress party. It has been said that Kumar is a loyal follower and admirer of Former CM S M Krishna
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X