ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಜಿ ಸಚಿವೆ ಬಿ ಟಿ. ಲಲಿತಾ ನಾಯಕ್‌ಗೆ ಕೊಲೆ ಬೆದರಿಕೆ ಪತ್ರ

|
Google Oneindia Kannada News

ಬೆಂಗಳೂರು, ಮಾರ್ಚ್ 21: ಬ್ರಾಹ್ಮಣ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಈ ಆಘಾತಕಾರಿ ವಿಚಾರವನ್ನು ಸ್ವತಃ ಬಿ.ಟಿ ಲಲಿತಾ ನಾಯಕ್ ಅವರೇ ಬಹಿರಂಗ ಪಡಿಸಿದ್ದಾರೆ. ಕೊಲೆ ಬೆದರಿಕೆ ಪತ್ರದ ಕುರಿತ ಸಮಗ್ರ ಮಾಹಿತಿ ಇಲ್ಲಿದೆ.

ಮಹಿಳಾ ಬಂಡಾಯ ಸಾಹಿತಿಯಾಗಿ, ಪತ್ರಕರ್ತೆ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಡಾ. ಬಿಟಿ ಲಲಿತಾ ನಾಯಕ್ ದಲಿತ ಮಹಿಳೆಯರ ಪರ ಧ್ವನಿಯೆತ್ತುವ ಮೂಲಕ ಪರಿಚಿತರು. ಮಾಜಿ ಸಚಿವ ಎಚ್‌.ಎಂ. ರೇವಣ್ಣ ಅವರಿಗೆ ನಲವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಲಲಿತಾ ನಾಯಕ್, ತಮಗೆ ಸೇರಿದಂತೆ ಹಲವು ಗಣ್ಯರಿಗೆ ಕೊಲೆ ಬೆದರಿಕೆ ಹಾಕಿ ಬಂದಿರುವ ಪತ್ರವನ್ನು ಉಲ್ಲೇಖಿಸಿ ಮಾತನಾಡಿದರು.

 Former Lalitha Naik has received a Life threatening letter

''ಮೇ. 1 ರಂದು ನನ್ನನ್ನು ಕೊಲೆ ಮಾಡುತ್ತಾರಂತೆ. ಈ ಕುರಿತ ಪತ್ರ ನನಗೆ ಬಂದಿದೆ. ಬಿಜೆಪಿ ಶಾಸಕ ಸಿ.ಟಿ. ರವಿ, ಸಂಪಾದಕ ರಂಗನಾಥ್(ಪಬ್ಲಿಕ್ ಟಿವಿ), ನಟ ಶಿವರಾಜ್ ಕುಮಾರ್ ಅವರನ್ನು ಕೊಲೆ ಮಾಡುತ್ತಾರಂತೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಪೊಲೀಸರು ಅದನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ಬೆದರಿಕೆಗಳಿಗೆ ನಾನು ಹೆದರುವಳು ಅಲ್ಲ. ಸಿ.ಟಿ. ರವಿಯನ್ನು ಕೊಲೆ ಮಾಡಿದರೆ ನಾನು ಉಳಿಯುತ್ತೇನೆ. ನನ್ನ ಕೊಲೆ ಮಾಡಿದರೆ ಸಿಟಿ ರವಿ ಉಳಿಯುತ್ತಾರೆ. ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಕೊಲೆ ಮಾಡುವರು ಎಲ್ಲಿದ್ದರೂ ಕೊಲೆ ಮಾಡುತ್ತಾರೆ. ಹಾಗಾಗಿ ನಾನು ಹೆದರಿಕೆಯಿಲ್ಲದೇ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ'' ಎಂದು ಲಲಿತಾ ನಾಯಕ್ ತಿಳಿಸಿದರು.

 Former Lalitha Naik has received a Life threatening letter

Recommended Video

ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಉಪಚುನಾವಣೆ, ಮೀಸಲಾತಿ ಬಗ್ಗೆ ಚರ್ಚೆ- ಸಿಟಿ ರವಿ ಮಾಹಿತಿ | Oneindia Kannada

ಬ್ರಾಹ್ಮಣ ಹುಡುಗಿಯರು ಅಂತರ್ಜಾತಿ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಎಚ್‌.ಎಂ. ರೇವಣ್ಣ ಅವರು ಕೂಡ ಬ್ರಾಹ್ಮಣ ಸಮುದಾಯದ ಹುಡುಗಿಯನ್ನು ಮದುವೆಯಾಗಿದ್ದಾರೆ. ಅವರು ತುಂಬಾ ಚೆನ್ನಾಗಿ ಜೀವನ ನಡೆಸುತ್ತಿದ್ದಾರೆ. ಬ್ರಾಹ್ಮಣ ಸಮುದಾಯದವರು ಹೆಣ್ಣು ಮಕ್ಕಳು ಋತುಮತಿಯಾದ ವೇಳೆ ಕಣ್ಣಿಗೆ ಬಟ್ಟೆ ಕಟ್ಟಿ ಕಾಡಿಗೆ ಬಿಡುತ್ತಿದ್ದರು. ಆಗ ಅಲೆಮಾರಿ ಸಮುದಾಯ ಅವರನ್ನು ಮದುವೆ ಆಗುತ್ತಿದ್ದರು. ಈಗ ಅಂತರ್ಜಾತಿ ವಿವಾಹಗಳು ಪ್ರೀತಿ ಆಧಾರದ ಮೇಲೆ ನಡೆಯುತ್ತಿವೆ. ಪ್ರೀತಿ ಇರೋದ್ರಿಂದ ಜಾತಿ ಮೀರಿ ಮದುವೆಗಳಾಗುತ್ತಿವೆ. ಇದನ್ನು ಸ್ವಾಮೀಜಿ ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.

English summary
Former minister and writer B.T. Lalitha Naik claims she has received life threat letter from unknown persons. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X