• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಟಾಕಿ ಸಿಡಿಸಿ ಜನರಿಗೆ ತೊಂದರೆ ಕೊಡುವವರ ವಿರುದ್ಧ ಕ್ರಮಕ್ಕೆ ಸುರೇಶ್‌ಕುಮಾರ್ ಪತ್ರ

|
Google Oneindia Kannada News

ಬೆಂಗಳೂರು, ಮೇ 23 : ಹುಟ್ಟುಹಬ್ಬದ ನೆಪದಲ್ಲಾಗಲಿ.. ಐಪಿಎಲ್ ಮ್ಯಾಚ್ ಗಳಲ್ಲಿ ಗೆದ್ದ ಖುಷಿಯಲ್ಲಾಗಲಿ ಪಟಾಕಿ ಸಿಡಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಮಾಜಿ ಸಚಿವ ಹಾಗೂ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಪಶ್ಚಿಮ ವಿಭಾಗದ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಪ್ರತೀ ದಿನ ರಾತ್ರಿ ಹತ್ತು ಗಂಟೆಯ ನಂತರ ಬೆಂಗಳೂರಿನಲ್ಲಿ ವಿವಿಧ ಕಾರಣಗಳಿಗಾಗಿ ಪಟಾಕಿ ಸಿಡಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಪಟಾಕಿ ಶಬ್ಧದಿಂದ ಶಿಶು ಮಕ್ಕಳಿಗೆ, ತುಂಬು ಗರ್ಭಿಣಿಯರಿಗೆ, ವಯೋವೃದ್ಧರಿಗಷ್ಟೇ ಅಲ್ಲದೆ ಪ್ರಾಣಿಪಕ್ಷಿಗಳಿಗಳಿಗೂ ತೊಂದರೆಯಾಗುತ್ತಿದ್ದು, ಕೂಡಲೇ ಕ್ರಮ ಜರುಗಿಸುವಂತೆ ಮನವಿ ಪತ್ರ ನೀಡಿದ್ದಾರೆ.

ಉಪ ಪೊಲೀಸ್ ಆಯುಕ್ತರು, ಪಶ್ಚಿಮ ವಿಭಾಗ ಹಾಗೂ ಉಪ ಪೊಲೀಸ್ ಆಯುಕ್ತರು, ಪಶ್ಚಿಮ, ಸಹಾಯಕ ಪೊಲೀಸ್ ಆಯುಕ್ತರು, ಮಲ್ಲೇಶ್ವರಂ, ಸಹಾಯಕ ಪೊಲೀಸ್ ಆಯುಕ್ತರು, ವಿಜಯನಗರ ಇವರುಗಳಿಗೆ ಪತ್ರ ಬರೆದಿದ್ದಾರೆ. ಜನರಿಗೆ ತೊಂದರೆಯಾಗುತ್ತಿರುವ ಇಂತಹ ಘಟನೆಗಳಿಗೆ ಆಸ್ಪದ ನೀಡದಂತೆ ಹಾಗೂ ಈ ರೀತಿಯ ಘಟನೆಗಳು ಪತ್ತೆಯಾದಲ್ಲಿ ನಿಯಾಮಾನುಸಾರ ಕ್ರಮ ಜರುಗಿಸಲು ತಮ್ಮ ವಲಯದ ಎಲ್ಲಾ ಹೊಯ್ಸಳ ಸಿಬ್ಬಂದಿ ಮತ್ತು ಬೀಟ್ ಕರ್ತವ್ಯದಲ್ಲಿ ತೊಡಗಿರುವ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲು ಮಾಜಿ ಸಚಿವ ಸುರೇಶ್ ಕುಮಾರ್ ಪತ್ರದಲ್ಲಿ ಕೋರಲಾಗಿದೆ.

Former minister Suresh Kumar letter TO bengaluru west division dcp

ಕಳೆದ ದೀಪಾವಳಿ ಸಮಯದಲ್ಲಿ ಹಸಿರು ಪಟಾಕಿಗಳನ್ನ ಮಾತ್ರ ಮಾರಾಟ ಮಾಡುವಂತೆ ಕೊರೋನಾ ಸಮಯದಲ್ಲಿ ರಾಜ್ಯ ಸರ್ಕಾರ ಆದೇಶ ಮಾಡಲಾಗಿತ್ತು. ಸರ್ಕಾರದ ಈ ನಿರ್ಧಾರವನ್ನ ಪರಿಸರ ಪ್ರೇಮಿಗಳು ಸಹ ಸ್ವಾಗತ ಮಾಡಿದರು. ಇದೀಗ ದೀಪಾವಳಿಯೂ ಇಲ್ಲ ಏನೂ ಇಲ್ಲ. ಆದರೂ ಅತಿಯಾದ ಪಟಾಕಿ ಸಿಡಿಸುವಂತಹ ಘಟನೆಗಳು ಬೆಂಗಳೂರಿನಲ್ಲಿ ಹುಟ್ಟುಹಬ್ಬ ಆಚರಣೆ ಸಮಯದಲ್ಲಿ, ಕ್ರಿಕೆಟ್ ಪಂದ್ಯಾವಳಿ ಗೆದ್ದ ಖುಷಿಯಲ್ಲಿ ಪಟಾಕಿ ಸಿಡಿಸುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ಪಶ್ಚಿಮ ಭಾಗದಲ್ಲಿ ವಿಜಯನಗರ, ಮಲ್ಲೇಶ್ವರಂ, ರಾಜಾಜಿನಗರ ಭಾಗಗಳಲ್ಲಿ ಮಾಲಿನ್ಯ ರಹಿತಕ್ಕೆ ಆಸ್ಪದ ನೀಡುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಮಾಜಿ ಸಚಿವ ಸುರೇಶ್ ಪಶ್ಚಿಮ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

   ಡುಪ್ಲೆಸಿಸ್ ಈ ಮೆಸೇಜ್ ಮಾಡದೇ ಇದ್ದಿದ್ರೆ ಡೆಲ್ಲಿ ವಿರುದ್ಧ ಮುಂಬೈ ಗೆಲ್ತಾನೆ ಇರ್ಲಿಲ್ಲ!! | Oneindia Kannada
   English summary
   Former minister Suresh Kumar write letter to crackdown on fireworks after 10 pm, Former Minister Suresh Kumar appeals to Police Commissioner of Bengaluru West division,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X