ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವರ್ತೂರು ಪ್ರಕಾಶ್ ಅಪಹರಣ ಪ್ರಕರಣ: ನಾಲ್ವರ ಬಂಧನ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 12:ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಇದುವರೆಗೆ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದಂತಾಗಿದೆ. ಆರೋಪಿಗಳು ವರ್ತೂರು ಪ್ರಕಾಶ್ ಹಾಗೂ ಅವರ ಕಾರು ಚಾಲಕ ಸುನಿಲ್‌ರನ್ನು ನ.25 ರಂದು ಅಪಹರಿಸಿದ್ದರು.

ವರ್ತೂರು ಪ್ರಕಾಶ್ ಕಿಡ್ನಾಪ್ ಹಿಂದಿನ ಸ್ಪೋಟಕ ಸತ್ಯ: ಮಗನಿಂದಲೇ ದುಷ್ಕೃತ್ಯ?ವರ್ತೂರು ಪ್ರಕಾಶ್ ಕಿಡ್ನಾಪ್ ಹಿಂದಿನ ಸ್ಪೋಟಕ ಸತ್ಯ: ಮಗನಿಂದಲೇ ದುಷ್ಕೃತ್ಯ?

ಪ್ರಕರಣ ಸಂಬಂಧ ಈವರೆಗೆ 30ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. ಬಂಧಿತರ ಸಂಖ್ಯೆ ಹೆಚ್ಚಲಿದೆ. ಪ್ರಮುಖ ಆರೋಪಿಗಳು ಸಿಕ್ಕಿಬಿದ್ದರೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Former Minister Varthur Prakash Kidnap Case: 4 People Arrested

ಪ್ರಕರಣದಲ್ಲಿ ಮೊದಲು ಸಿಕ್ಕಿಬಿದ್ದ ಇಬ್ಬರು ಆರೋಪಿಗಳ ಹೇಳಿಕೆ ಆಧರಿಸಿ ಬೆಂಗಳೂರಿನಲ್ಲಿ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ.

ಆದರೆ ಅಪಹರಣ ಕಿಂಗ್‌ಪಿನ್ ಎನ್ನಲಾದ ಪ್ರಮುಖ ಆರೋಪಿ ತಮಿಳುನಾಡಿನ ಹೊಸೂರು ಮೂಲದವನಾಗಿದ್ದು ಅವನಿಗಾಗಿ ತೀವ್ರ ಶೋಧಕಾರ್ಯ ನಡೆಯುತ್ತಿದೆ. ಸಧ್ಯದಲ್ಲೇ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಕೋಲಾರಕ್ಕೆ ಆಗಮಿಸಿ ಮಾಹಿತಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಸು ಖರೀದಿ ಮತ್ತು ಡೈರಿ ವ್ಯವಹಾರದಲ್ಲಿ, ಸಾಲ ನೀಡಬೇಕಾಗಿದ್ದರಿಂದ, ಮಹಾರಾಷ್ಟ್ರ ಮೂಲದವರು ಬಾಕಿ ಹಣಕ್ಕಾಗಿ ವರ್ತೂರು ಪ್ರಕಾಶ್ ಅವರನ್ನು ಕಿಡ್ನಾಪ್ ಮಾಡಿರುವ ಬಗ್ಗೆಯೂ ಸುದ್ದಿ ಹರಿದಾಡುತ್ತಿತ್ತು. ಆದರೆ, ಪ್ರಕಾಶ್ ಇದನ್ನೂ ನಿರಾಕರಿಸಿದ್ದರು.

English summary
Former Minister Varthur Prakash Kidnap Case, Police Arrested 4 in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X