ಬೆಂಗಳೂರು: ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತ
ಬೆಂಗಳೂರು,ಜನವರಿ 19:ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಮ್ಮ ಪತ್ನಿ ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಪರಿಣಾಮ ಮಾಜಿ ಶಾಸಕ ಅನಿಲ್ ಲಾಡ್ ಗಾಯಗೊಂಡಿದ್ದಾರೆ.
ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಪಲ್ಟಿ: ಪತ್ನಿ ಸಾವು
ಸಂಜಯನಗರದಲ್ಲಿ ಈ ಅವಘಡ ಸಂಭವಿಸಿದೆ. ಅನಿಲ್ ಲಾಡ್ ಪತ್ನಿ ಆರತಿ ಕಾರು ಚಲಾಯಿಸುತ್ತಿದ್ದವರು. ಪತಿ ಅನಿಲ್ ಲಾಡ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವಿಕ್ರಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ನೇಹಿತರ ಮನೆಗೆ ಹೋಗಿ ವಾಪಸ್ ಆಗುವಾಗ ಕಾರು ಅಪಘಾತಕ್ಕೆ ಗುರಿಯಾಗಿದೆ. ರಸ್ತೆಯಲ್ಲಿ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆಸಿದ್ದರು.
ಪರಿಣಾಮ ಕಾರು ಜಖಂಗೊಂಡಿದೆ.
ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಆರತಿ ಅವರಿಗೆ ಯಾವುದೇ ಅಪಾಯವಾಗಿಲ್ಲ. ಅನಿಲ್ ಲಾಡ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಆರ್.ಟಿ. ನಗರ ಸಂಚಾರ ಠಾಣಾ ಪೊಲೀಸರು ಪೊಲೀಸರು ತಿಳಿಸಿದ್ದಾರೆ.
ಅನಿಲ್ ಲಾಡ್ ಎರಡು ಕೈಗಳಿಗೆ ಗಾಯಗಳಾಗಿವೆ. ಈ ಸಂಬಂಧ ಇದುವರೆಗೂ ಯಾವುದೇ ಪ್ರಕರಣ ದಾಖಲಿಸಿಕೊಳ್ಳಲಾಗಿಲ್ಲ.