• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಿಕೆಶಿ ಆರೋಗ್ಯದಲ್ಲಿ ಏರುಪೇರು, ಅಪೋಲೋ ಆಸ್ಪತ್ರೆಗೆ ದಾಖಲು

|
Google Oneindia Kannada News
   DK Shivakumar admitted to a Bengaluru private hospital | Oneindia Kannada

   ಬೆಂಗಳೂರು, ನವೆಂಬರ್ 02: ಮಾಜಿ ಸಚಿವ, ಕನಕಪುರ ಶಾಸಕ ಡಿಕೆ ಶಿವಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಶುಕ್ರವಾರ ರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

   ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೊಲೋ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಇಂದು ಅಲ್ಲಿನ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.

   ತೀವ್ರ ಬೆನ್ನುನೋವು ಮತ್ತು ರಕ್ತದೊತ್ತಡದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

   ಉಪಚುನಾವಣೆ ಅಖಾಡಕ್ಕೂ ಮುನ್ನ ಡಿಕೆಶಿಗೆ ಮಹತ್ವದ ಜವಾಬ್ದಾರಿ!ಉಪಚುನಾವಣೆ ಅಖಾಡಕ್ಕೂ ಮುನ್ನ ಡಿಕೆಶಿಗೆ ಮಹತ್ವದ ಜವಾಬ್ದಾರಿ!

   ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್‌ರನ್ನು ಸೆಪ್ಟೆಂಬರ್ 3ರಂದು ಬಂಧಿಸಿತ್ತು. ಇದಕ್ಕೂ ಮೊದಲು ಆಗಸ್ಟ್ 30ರಿಂದ ಸತತ ನಾಲ್ಕು ದಿನ ವಿಚಾರಣೆಗೆ ಒಳಪಡಿಸಿತ್ತು.

   ಬಳಿಕ ಅವರನ್ನು ವಿಶೇಷ ನ್ಯಾಯಾಲಯವು ಇ.ಡಿ ವಶಕ್ಕೆ ಒಪ್ಪಿಸಿತ್ತು. ನಂತರ ಹಲವು ದಿನಗಳ ಕಾನೂನು ಹೋರಾಟದ ನಂತರ ಅಕ್ಟೋಬರ್ 23 ರಂದು ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

   English summary
   Former MLA DK Shivakumar's Health Upset, Admitted To Hospital In Bengaluru
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X