ಸಿದ್ದರಾಮಯ್ಯ ಅನಾರೋಗ್ಯ, ವಾಟಾಳ್ ನಾಗರಾಜ ಏನಂದ್ರು?
ಬೆಂಗಳೂರು, ಡಿಸೆಂಬರ್ 13: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಅವರ ಹಿತೈಸಿಗಳು, ಗಣ್ಯರು ಬೆಂಗಳೂರಿನ ವೆಗಾಸ ಆಸ್ಪತ್ರೆಗೆ ತೆರಳುತ್ತಿದ್ದಾರೆ. ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಅವರು ಸದ್ಯ ಚೇತಿಸಿಕೊಳ್ಳುತ್ತಿದ್ದಾರೆ.
ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಕನ್ನಡಪರ ಹೋರಾಟಗಾರ, ಮಾಜಿ ಶಾಸಕ ವಾಟಾಳ ನಾಗರಾಜ, ಸಿದ್ದರಾಮಯ್ಯ ಗಟ್ಟಿ ಮನುಷ್ಯ. ಅವರು ನಮ್ಮೊಂದಿಗೆ ಇನ್ನೂ ತುಂಬಾ ದಿನ ಇರುತ್ತಾರೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಸಿದ್ದರಾಮಯ್ಯ ಬಹಳ ವರ್ಷ ರಾಜಕೀಯದಲ್ಲಿ ಇರಬೇಕು. ಕರ್ನಾಟಕ ಕಂಡಿರುವ ಅದ್ಬುತ ರಾಜಕಾರಣಿ. ಇವತ್ತಿನ ಕೆಟ್ಟ ರಾಜಕಾರಣ ಸಿದ್ದರಾಮಯ್ಯಗೂ ಆಗಲ್ಲ, ನನಗೂ ಆಗಲ್ಲ ಎಂದರು.

ಕಳೆದ ಬುಧವಾರ ಎದೆನೋವು ಕಾಣಿಸಿಕೊಂಡಿದ್ದಕ್ಕೆ ಆಂಜಿಯೋಪ್ಲಾಸ್ಟ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಅವರಿಗೆ ಕನಿಷ್ಠ ಒಂದು ವಾರ ವಿಶ್ರಾಂತಿ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.












Click it and Unblock the Notifications