Sumalatha Ambareesh: 'ಕೇವಲ ನಂಬಿಕೆ ಇರಲಿ': ಕೊನೆಗೂ ಮೌನ ಮುರಿದ ಸುಮಲತಾ ಅಂಬರೀಷ್
ಬೆಂಗಳೂರು, ಜುಲೈ 01: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಜೈಲುಪಾಲಾಗಿದ್ದಾರೆ. ದರ್ಶನ್ ಬಂಧನವಾಗಿ ಸುಮಾರು ಇಪ್ಪತ್ತು ದಿನಗಳು ಕಳೆಯುತ್ತಿದ್ದು, ಈಗಾಗಲೇ ಕೆಲವು ನಟ ನಟಿಯರು ದರ್ಶನ್ ಭೇಟಿ ಮಾಡುವ ಪ್ರಯತ್ನ ಮಾಡಿದ್ದಾರೆ. ಇನ್ನೂ ಕೆಲವರು ದರ್ಶನ್ ಪರ ಧ್ವನಿ ಎತ್ತಿದ್ದಾರೆ. ಆದರೆ ದರ್ಶನ್‌ಗೆ ಬಹಳ ಆಪ್ತರೇ ಮೌನ ವಹಿಸಿದ್ದಾರೆ.
ದರ್ಶನ್‌ಗೆ ಬಹಳ ಆಪ್ತರಾದ ಮಾಜಿ ಸಂಸದೆ ಸುಮಲತಾ ಅಂಬರೀಷ್, ನಟ ಅಭಿಷೇಕ್ ಅಂಬರೀಶ್, ನಟ ಧನ್ವೀರ್ ಸೇರಿದಂತೆ ಕೆಲ ದರ್ಶನ್ ಅತ್ಯಾಪ್ತರು ಸೈಲೆಂಟ್ ಆಗಿರುವುದು ಚರ್ಚೆಗೆ ಕಾರಣವಾಗಿದೆ. ಇಂತಹ ಕಷ್ಟದ ಸಮಯದಲ್ಲಿ ದರ್ಶನ್‌ನಿಂದ ಅಂತರ ಕಾಯ್ದುಕೊಂಡರೇ ಎನ್ನುವ ಪ್ರಶ್ನೆಗಳು ಎಲ್ಲರನ್ನೂ ಕಾಡುತ್ತಿದೆ.

ದರ್ಶನ್ ನನ್ನ ದೊಡ್ಡ ಮಗ ಎಂದೇ ಹೇಳುತ್ತಿದ್ದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಘಟನೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಇರುವುದದರ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಮಧ್ಯಯೇ ಇಂದು ಸುಮಲತಾ ಅಂಬರೀಷ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿರುವ ಪೋಸ್ಟ್‌ವೊಂದು ಎಲ್ಲರ ಗಮನ ಸೆಳೆದಿದೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ ಒಂದು ಕೃಷ್ಣ ವಾಕ್ಯ ಹಂಚಿಕೊಂಡಿರುವ ಸುಮಲತಾ ಅಂಬರೀಷ್ ಪರೋಕ್ಷವಾಗಿ ದರ್ಶನ್ ಪರ ಧ್ವನಿ ಎತ್ತಿದ್ದಾರೆ ಎನ್ನಲಾಗುತ್ತಿದೆ. 'ಎಲ್ಲವೂ ಸರಿ ಹೋಗುವ ಮೊದಲು ಬಹಳಷ್ಟು ತಪ್ಪಾಗುತ್ತದೆ. ಕೇವಲ ನಂಬಿಕೆ ಇರಲಿ' ಎನ್ನುವ ಸಾಲುಗಳನ್ನು ಸುಮಲತಾ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಸುಮಲತಾ, ದರ್ಶನ್‌ಗಾಗಿ ಈ ಸಾಲುಗಳನ್ನು ಹಾಕಿದ್ದಾರೆ ಎಂದು ಅನೇಕರು ಅಂದಾಜಿಸುತ್ತಿದ್ದಾರೆ. ಸದ್ಯ ಈ ಪೋಸ್ಟ್‌ನ ಸ್ಕ್ರೀನ್ ಶಾಟ್‌ಗಳು ಎಲ್ಲಡೆ ವೈರಲ್ ಆಗುತ್ತಿದೆ.
ದರ್ಶನ್ ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಸಂದೇಶ
ದರ್ಶನ್ ಜೈಲು ಪಾಲಾದ ಬಳಿಕ ಯಾವ ಸೆಲೆಬ್ರೆಟಿಗಳು ಸಹ ದರ್ಶನ್ ಬಿಡುಗಡೆಗೆ ಹಾತೊರೆಯುತ್ತಿದ್ದ ಅಭಿಮಾನಿಗಳ ಬೆಂಬಲದ ಪರ ಧ್ವನಿ ಎತ್ತಿರಲಿಲ್ಲ. ಈ ಸಮಯದಲ್ಲಿ ಸ್ವತಃ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಸಂದೇಶವೊಂದನ್ನು ನೀಡಿದ್ದರು. 'ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ ಸೆಲೆಬ್ರಿಟಿಗಳನ್ನು ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.

ಇದೊಂದು ಪರೀಕ್ಷೆಯ ಸಮಯ. ನನಗೆ,ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ. ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ ಎಂದು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು.












Click it and Unblock the Notifications