• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ಸೋಂಕಿನಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 5: ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡರು.

ಎಚ್‌ಡಿ ದೇವೇಗೌಡರು ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಕಳೆದ ಬುಧವಾರವಷ್ಟೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ; ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ; ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆ

ಇದೀಗ ದೇವೇಗೌಡರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕೆಲವು ದಿನಗಳಿಂದ ನಮ್ಮ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ತೆರಳಿ ಕೊರೊನಾ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಬೇಕು.

ನಮ್ಮ ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಮನವಿ ಮಾಡಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಕರೆ ಮಾಡಿ ದೇವೇಗೌಡರ ಆರೋಗ್ಯ ವಿಚಾರಿಸಿದ್ದರು.

ಸಚಿವ ಕೆ ಸುಧಾಕರ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಇವರ ಆರೋಗ್ಯ ಬೇಗ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದರು. ಭಾರತದಲ್ಲಿ ಮತ್ತೆ ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ 1,03,558 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 478 ಮಂದಿ ಸಾವನ್ನಪ್ಪಿದ್ದಾರೆ.

ಕಳೆದ ವರ್ಷ ಕೊರೊನಾ ಆರ್ಭಟ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾದ ದಿನನಿತ್ಯದ ಕೊರೊನಾ ಪ್ರಕರಣ ಇದಾಗಿದೆ. ಕಳೆದ ಸೆಪ್ಟೆಂಬರ್‌ 16ರಂದು 97,894 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಆನಂತರ ಅತಿ ಹೆಚ್ಚು ದಾಖಲಾದ ಕೊರೊನಾ ಪ್ರಕರಣ ಭಾನುವಾರದ್ದಾಗಿದೆ.

   Raksha Ramaiah : ನಾಯಕರಿಗೆ ಬುದ್ದಿ ಇಲ್ವಾ ಅಂತ !! | Oneindia Kannada

   ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್‌ ಬುಲೆಟಿನ್‌ನಲ್ಲಿ ಈ ಕುರಿತು ಮಾಹಿತಿ ನೀಡಿದೆ. ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 7,41,830 ಆಗಿದೆ.

   English summary
   Former Prime Minister HD Devegowda Recovered From Covid19 And Discharged From Hospital On April 5.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X