ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನರ್ಹತೆ ಎಂಬುದೇ ಒಂದು ಕಳಂಕ: ಮಾಜಿ ಸ್ಪೀಕರ್ ರಮೇಶ್ ಕುಮಾರ್

|
Google Oneindia Kannada News

ಬೆಂಗಳೂರು, ನವೆಂಬರ್ 13:ಅನರ್ಹತೆ ಎಂಬುದೇ ಒಂದು ಕಳಂಕ ನಾನು ನಿಯಮದ ಪ್ರಕಾರವೇ ವಿಧಾನಸಭೆ ಮುಗಿಯುವರೆಗೆ ಅನರ್ಹತೆ ಮಾಡಿದ್ದೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಬಹುದು ಎಂದು ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಳಿಕ ರಮೇಶ್ ಕುಮಾರ್ ಈ ಹೇಳಿಕೆ ನೀಡಿದ್ದಾರೆ.

ಶಾಸಕರು ಏನಾದರೂ ಹೇಳಿಕೊಳ್ಳಲಿ ನಾನು ಅದಕ್ಕೆ ನಾನು ಮನ್ನಣೆ ಕೊಡುವುದಿಲ್ಲ, ನಾನು ಯಾವ ಪಕ್ಷದ ಪರವಾಗಿಯೂ ಇಲ್ಲ, ಪಕ್ಷದ ವಿರುದ್ಧದ ಚಟುವಟಿಕೆ ಮಾಡಿದ್ದ ಕಾರಣ ಅವರನ್ನು ಅನರ್ಹಗೊಳಿಸಲಾಗಿತ್ತು.

Former Speaker Ramesh Kumar Says Disqualification Is A Stigma

ಸುಪ್ರೀಂ ಕೋರ್ಟ್ ತೀರ್ಪಿನಿಂದ ನನಗೆ ಭಾಗಶಃ ಸಂತೋಷವಾಗಿದೆ. ನನ್ನ ಅಭಿಪ್ರಾಯವನ್ನು ಮಾನ್ಯ ಮಾಡಿದ್ದು ತೃಪ್ತಿ ತಂದಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಗೌರವಿಸುತ್ತೇನೆ. ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. ಅನರ್ಹರನ್ನು ಆಕೆ ಮಾಡುವುದು ಮತದಾರರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ 2023ರವರೆಗೆ ಅಂದರೆ ವಿಧಾನಸಭೆ ಅವಧಿ ಮುಗಿಯವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ.

ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ. ಇದೇ ವೇಳೆ ಮರು ಚುನಾವಣೆಯಲ್ಲಿ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ ಎಂದು ತಿಳಿಸಿದೆ.

ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ತೆರವಾದ ಕ್ಷೇತ್ರಗಳಿಗೆ 6 ತಿಂಗಳ ಒಳಗಡೆ ಚುನಾವಣೆ ನಡೆಸಬೇಕಾಗುತ್ತದೆ.

English summary
Former Speaker Ramesh Kumar Said that Disqualification Is a Stigma. As per rule, I am disqualified till the end of the assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X