ಅಧಿಕೃತವಾಗಿ ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾದ ಧನಂಜಯ ಕುಮಾರ್
ಬೆಂಗಳೂರು, ಆಗಸ್ಟ್ 03 : ಒಂದು ಕಾಲದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿದ್ದ ಧನಂಜಯ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಮಾಜಿ ಕೇಂದ್ರ ಸಚಿವ ಧನಂಜಯ ಕುಮಾರ್ ಅವರು ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರುವ ಬಗ್ಗೆ ಮಾತುಕತೆ ನಡೆಸಿದದ್ದರು. ಅದರಂತೆಯೇ ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಡಾ. ಜಿ. ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರಿದರು.

ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಧನಂಜಯ ಕುಮಾರ್ ಅವರು ಈಗ ಕಾಂಗ್ರೆಸ್ ಪಾಳಯಕ್ಕೆ ಲಗ್ಗೆ ಹಾಕಿದ್ದಾರೆ.












Click it and Unblock the Notifications