ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ

|
Google Oneindia Kannada News

ಬೆಂಗಳೂರು, ಜುಲೈ 02: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಾಲ್ಕು ದಿನಗಳ ಹಿಂದಿನಿಂದ ಚಿಕಿತ್ಸೆ ಪಡೆಯುತ್ತಿರುವ ಅವರು ಮೂತ್ರ ಪಿಂಡ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಕಿಡ್ನಿ ಕಸಿ ಚಿಕಿತ್ಸೆ ನಂತರ ಮನೆಗೆ ಮರಳಿದ ಜೇಟ್ಲಿ ಕಿಡ್ನಿ ಕಸಿ ಚಿಕಿತ್ಸೆ ನಂತರ ಮನೆಗೆ ಮರಳಿದ ಜೇಟ್ಲಿ

ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ(1996) ಧನಂಜಯ್ ಕುಮಾರ್ ಅವರು ಮಾಜಿ ನಾಗರಿಕ ವಿಮಾನಯಾನ ಸಚಿವರಾಗಿದ್ದರು.

Former union minister Dhanjaya Kumars condition is critical: BGS Bengaluru Doctors

ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿರುವ ಅವರು, ಬಿಜೆಪಿ ತೊರೆದು, ಬಿಎಸ್ ಯಡಿಯೂರಪ್ಪ ಅವರ ಕೆಜೆಪಿ ಪಕ್ಷಕ್ಕೂ ಸೇರಿದ್ದರು. ಧನಂಜಯ್ ಕುಮಾರ್ ಮಾಜಿ ಸಂಸದರೂ ಹೌದು.10ನೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಧನಂಜಯ ಕುಮಾರ್, ಕಾಂಗ್ರೆಸ್ ಧುರೀಣ ಜನಾರ್ದನ ಪೂಜಾರಿ ಅವರನ್ನು ಸೋಲಿಸಿ, ಸಂಸದರಾಗಿದ್ದರು.

ಬಿಜೆಪಿಯಲ್ಲಿದ್ದ ಸಂದರ್ಭದಲ್ಲಿ ಕೇಂದ್ರ ಸಚಿವರೂ ಆಗಿದ್ದ ಅವರು, ಬಿ ಎಸ್ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ನಂತರ ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದಾಗ ಬಿಜೆಪಿ ಬಿಟ್ಟು ಕೆಜೆಪಿ ಸೇರಿದ್ದರು. ಮತ್ತೆ ಬಿ ಎಸ್ ವೈ ಬಿಜೆಪಿಗೆ ಹಿಂದಿರುಗಿದ ನಂತರ, ಕೆಲವು ವೈಮನಸ್ಯದಿಂದಾಗಿ ಅವರು ಕಾಂಗ್ರೆಸ್ ಸೇರಿದ್ದಾರೆ.

English summary
Former union minister Dhanjay Kumar's condition is critical since four days. He is suffering from kidney problem, He is taking treatment in BGS Globa hospital in Kengeri in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X