ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ, ರೋಗಿಗಳು ಸೇರಿ ನಾಲ್ವರು ಸ್ಥಳದಲ್ಲಿಯೇ ಸಾವು
ಬೆಂಗಳೂರು, ನವೆಂಬರ್ 18 : ನಿಂತಿದ್ದ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹೊಸೂರು ಬಳಿ ನಡೆದಿದೆ. ಆಂಬ್ಯಲೆನ್ಸ್‌ನಲ್ಲಿ ಇಬ್ಬರು ರೋಗಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿತ್ತು, ಇಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಆಂಬ್ಯುಲೆನ್ಸ್ ಚಾಲಕ ಜೈಸೂರ್ಯ, ಸಹಾಯಕ ಮದನ್ ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರು ರೋಗಿಳು ಸಹ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೊಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು, ಶವಗಳನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ತಿರುಚಿಯಿಂದ ಬೆಂಗಳೂರಿಗೆ ಬರುತ್ತಿದ್ದ ಆಂಬ್ಯುಲೆನ್ಸ್ ಭಾನುವಾರ ಮುಂಜಾನೆ 3.30ರ ಸುಮಾರಿಗೆ ಲಾರಿಗೆ ಹಿಂಬಂದಿಯಿಂದ ಡಿಕ್ಕಿ ಹೊಡೆದಿದೆ. ಡೀಸೆಲ್ ಖಾಲಿಯಾಗಿ ಲಾರಿಯನ್ನು ನಿಲ್ಲಿಸಲಾಗಿತ್ತು. ವೇಗವಾಗಿ ಬಂದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ.

ಎಚ್1 ಎನ್1 ಜ್ವರದಿಂದ ಬಳಲುತ್ತಿದ್ದ ಇಬ್ಬರು ರೋಗಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿತ್ತು. ಇಬ್ಬರು ರೋಗಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೊಸೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications