ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಅಕ್ರಮ ಚಿನ್ನ ಸಾಗಣೆ: ನಾಲ್ವರ ಬಂಧನ
ಬೆಂಗಳೂರು, ಮೇ 18: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಅಕ್ರಮ ಚಿನ್ನ ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 39.57 ಲಕ್ಷ ರೂ. ಬೆಲೆ ಬಾಳುವ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ 39.57 ಲಕ್ಷ ಮೌಲ್ಯದ 1.2 ಕೆಜಿ ಚಿನ್ನವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹಾಗೆಯೇ ಅಕ್ರಮವಾಗಿ ಚಿನ್ನ ಸಾಗಿಸ್ತಿದ್ದ ನಾಲ್ವರನ್ನೂ ಕೂಡ ಬಂಧಿಸಲಾಗಿದೆ.

ಭಾರತದ ಓರ್ವ ಹಾಗೂ ಶ್ರೀಲಂಕಾ ಮೂಲದ ಮೂವರು ಅಕ್ರಮವಾಗಿ ಚಿನ್ನವನ್ನು ವಿಮಾನದಲ್ಲಿ ಸಾಗಿಸಲು ಮುಂದಾಗಿದ್ದರು. ಆದರೆ ಆರೋಪಿಗಳು ಎಷ್ಟೇ ಚಾಣಾಕ್ಷ್ಯತನ ಮಾಡಿದರು ಅಧಿಕಾರಿಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.












Click it and Unblock the Notifications