ಬಿಡದಿ ಬಳಿ ರಸ್ತೆ ಅಪಘಾತ, 4 ವಿದ್ಯಾರ್ಥಿಗಳ ಸಾವು
ರಾಮನಗರ, ಅಕ್ಟೋಬರ್ 06: ಬಿಡದಿಯ ಕೆಂಪನಹಳ್ಳಿ ಗೇಟ್ ಬಳಿ ಶುಕ್ರವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ.
ಕಾರು ಮತ್ತು ಕಂಟೇನರ್ ನಡುವೆ ಡಿಕ್ಕಿಯಾಗಿದ್ದು ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. ಮೃತ ಇಬ್ಬರು ಕೇರಳ ಮೂಲದಾವರಾಗಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾದ ಜೋಯದ್ ಜಾಕಬ್ ಮತ್ತು ದಿವ್ಯ ಹಾಗೂ ವೆಲ್ಲೂರಿನ ವಿಐಟಿಯು ಕಾಲೇಜಿನ ವಿದ್ಯಾರ್ಥಿಗಳಾದ ಜೀನಾ, ನಿಖಿತ್ ಗುರುತಿಸಲಾಗಿದೆ. ಮೃತರೆಲ್ಲರೂ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಾಗಿದ್ದಾರೆ.

ಬೆಳಿಗ್ಗೆ 3.30ರ ಸುಮಾರಿಗೆ ಇವರೆಲ್ಲರೂ ಕಾರಿನಲ್ಲಿ ಬೆಂಗಳೂರಿನ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಮೈಸೂರು ಕಡೆಗೆ ಹೋಗುತ್ತಿದ್ದ ಕಂಟೈನರ್ (ಸಂಖ್ಯೆ HR 55, Y -5331) ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಡಿವೈಎಸ್ಪಿ ಎಂ.ಕೆ. ತಮ್ಮಯ್ಯ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications