ನಗರದಲ್ಲಿ ನಾಲ್ಕು ಹೊಸ ಆಸ್ಪತ್ರೆ ಸ್ಥಾಪನೆ: ಕುಮಾರಸ್ವಾಮಿ
ಬೆಂಗಳೂರು, ಮೇ 31: ನಗರದಲ್ಲಿ ನಾಲ್ಕು ಹೊಸ ಸಾರ್ವಜನಿಕ ಆಸ್ಪತ್ರೆಗಳನ್ನು ತೆರೆಯಲು ಸರ್ಕಾರ ನಿಶ್ಚಯಿಸಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.
ಪ್ರತಿ ಆಸ್ಪತ್ರೆ ನಿರ್ಮಾಣಕ್ಕೆ 100 ರಿಂದ 150 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ. ನೂತನ ಆಸ್ಪತ್ರೆಗೆ ಸಚಿವ ಸಂಪುಟದ ಒಪ್ಪಿಗೆ ದೊರೆತಿದೆ ಎಂದು ಹೇಳಿದರು. ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಸರಿಸಮನಾಗಿ ಆ ಸರ್ಕಾರಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತವೆ ಎಂದರು.
ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆ, ಸಂಜಯಗಾಂಧಿ ಆಸ್ಪತ್ರೆಗಳ ಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ಕೆಲವು ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳಿಗಿಂತಲೂ ಚೆನ್ನಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದರು.

ಆರೋಗ್ಯ ಸಮಸ್ಯೆ ಉಳ್ಳವರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆಯನ್ನು ಸರ್ಕಾರಿ ಆಸ್ಪತ್ರೆಗಳು ನೀಡುತ್ತಿರುವುದು ಸ್ವಾಗತಾರ್ಹ ಎಂದು ಅವರು ಹೇಳಿದರು.
ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಸ್ಪತ್ರೆಗಳ ನಿರ್ಮಾಣಕ್ಕೆ ಸಂಪುಟವು ಒಪ್ಪಿಗೆ ನೀಡಿದೆ. ಬೆಂಗಳೂರು ಮಾತ್ರವಲ್ಲದೆ, ಮೈಸೂರು, ವಿಜಯಪುರ, ರಾಯಚೂರು ಇನ್ನೂ ಇತರ ಜಿಲ್ಲೆಗಳಲ್ಲಿ ಆಸ್ಪತ್ರೆ ನಿರ್ಮಾಣ, ಅಭಿವೃದ್ಧಿಗೆ ಅನುದಾನವನ್ನು ನೀಡಲಾಗಿದೆ.












Click it and Unblock the Notifications