ಫ್ರೇಜರ್ ಟೌನ್ ಪ್ರಕರಣ: ಇನ್ಸ್ ಪೆಕ್ಟರ್ ಮೇಲೆ ಎಫ್ಐಆರ್
ಬೆಂಗಳೂರು, ಜು.17: ಫ್ರೇಜರ್‌ಟೌನ್ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಅಮಾನತುಗೊಂಡಿರುವ ಪುಲಿಕೇಶಿನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಹ್ಮದ್ ರಫಿ ವಿರುಧ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲೂ ರಫಿಯನ್ನು ಬಂಧಿಸುವ ಸಾಧ್ಯತೆ ಇದೆ.
ಕರ್ತವ್ಯ ನಿರ್ವಹಣೆಯಲ್ಲಿ ಬೇಜವಾಬ್ದಾರಿ ತೋರಿಸಿ, ಕರ್ತವ್ಯ ಲೋಪ ಎಸಗಿರುವ ರಫೀಕ್ ವಿರುದ್ಧ ಪುಲಿಕೇಶಿನಗರ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 166(ಎ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ದೂರು ದಾಖಲಾಗಿ ಆರೋಪಿಯನ್ನು ಬಂಧಿಸಿದ್ದರೂ, ಇನ್ಸ್‌ಪೆಕ್ಟರ್ ರಫೀಕ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿರಲಿಲ್ಲ. ಮಾಧ್ಯಮಗಳಲ್ಲಿ ಮಂಗಳವಾರ ವರದಿ ಪ್ರಕಟಗೊಂಡ ಬಳಿಕವಷ್ಟೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಘಟನೆ ವಿವರ ಗೊತ್ತಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಫ್ರೇಜರ್‌ಟೌನ್ ಯುವತಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಗುರುವಾರ ಬೆಳಗ್ಗೆ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದರು. ಈ ವೇಳೆ ವಿದ್ಯಾರ್ಥಿಗಳನ್ನು ತಡೆದ ಪೊಲೀಸರು, ಅವರ ಮೇಲೆ ಲಾಠಿ ಚಾರ್ಜ್ ಸಹ ನಡೆಸಿದರು.

ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಜಾರ್ಜ್ ಅವರ ನಿವಾಸಕ್ಕೆ ವಿದ್ಯಾರ್ಥಿಗಳು ಮುತ್ತಿಗೆ ಹಾಕಲು ಯತ್ನಿಸಿದರು. ಅಲ್ಲದೆ ವಿದ್ಯಾರ್ಥಿಗಳು ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನಲೆಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಜಾರ್ಜ್ ಹಾಗೂ ಹಲ್ಲೆ ನಡೆಸಿದರು. ಇನ್ನು ಕೆಲವು ವಿದ್ಯಾರ್ಥಿಗಳ ಶರ್ಟ್ ಕಾಲರ್ ಹಿಡಿದು ಎಳೆದೊಯ್ದರು.
ಸದನದಲ್ಲೂ ಸದ್ದು: 22 ವರ್ಷದ ಯುವತಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ವಿಧಾನಸಭೆ ಸದನದಲ್ಲೂ ಸದ್ದು ಮಾಡಿದೆ. ಇನ್ಸ್ ಪೆಕ್ಟರ್ ರಫೀಕ್ ಮೇಲೆ ಎಫ್ ಐಆರ್ ದಾಖಲಿಸುವಂತೆ ಬಹುತೇಕ ಶಾಸಕರು ಆಗ್ರಹಿಸಿದರು.
ದೂರು ನೀಡಲು ಬಂದ ಯುವತಿ ಮೇಲೆ ಒತ್ತಡ ಹೇರಿ ದೂರಿನ ಪ್ರತಿ ತಿದ್ದುವಂತೆ ಮಾಡಿರುವುದು, ಐಪಿಸಿ ಸೆಕ್ಷನ್ 376(ರೇಪ್) ಬದಲಾಗಿ ಐಪಿಸಿ ಸೆಕ್ಷನ್ 364 ಎ(ಕಿಡ್ನಾಪ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವುದಕ್ಕೆ ಬಿಜೆಪಿ ಶಾಸಕರು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿ ಸಭಾ ತ್ಯಾಗ ಮಾಡಿದ್ದಾರೆ. ಗೃಹ ಸಚಿವ ಕೆ.ಜೆ ಜಾರ್ಜ್ ಅವರು ಇಲಾಖೆ ನಿಭಾಯಿಸಲು ಅಸಮರ್ಥರಾಗಿದ್ದಾರೆ ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.[ಸಹನೆ ಕಳೆದುಕೊಂಡ ಗೃಹ ಸಚಿವ ಜಾರ್ಜ್]












Click it and Unblock the Notifications