Fraud Case: ಚೈತ್ರಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್
ಬೆಂಗಳೂರು, ಸೆಪ್ಟಂಬರ್ 13: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಪ್ರಕರಣದ ಆರೋಪಿಯಾಗಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬುಧವಾರ ರಾತ್ರಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಉಡುಪಿಯ ಉದ್ಯಮಿಯೊಬ್ಬರಿಗೆ ಬಿಜೆಪಿಯಿಂದ ಶಾಸಕ ಸ್ಥಾನದ ಟಿಕೆಟ್ ಕೊಡಿಸುವುದಾಗಿ ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಸಿಸಿಬಿ ಪೊಲೀಸರು ಚೈತ್ರಾ ಸೇರಿದಮತೆ ಕೆಲವರನ್ನು ಬಂಧಿಸಿ ವಶಕ್ಕೆ ಪಡೆದಿತ್ತು.

ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಚೈತ್ರಾ ಪರ ವಕೀಲರು ಆರೋಪಿಗಳಿಗೆ ಸಿಸಿಬಿ ಪೊಲೀಸರು ಯಾವುದೇ ನೋಟಿಸ್ ನೀಡದೇ ಬಂಧಿಸಿದ್ದಾರೆ ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರು.
CRPC 41ರ ಅಡಿ ನೋಟಿಸ್ ನೀಡಬೇಕಿತ್ತು. ಆದರೆ ಅದನ್ನು ನೀಡಿದೇ ಬಂಧಿಸುವ ಮೂಲಕ ಸಿಸಿಬಿ ಅಧಿಕಾರಿಗಳು ನಿಯಮ ಉಲ್ಲಂಘಿಸಿದ್ದಾರೆ ಎಂದು ಅವರು ತಿಳಿಸಿದರು.
ಈ ಕಾರಣದಿಂದ ಸದ್ಯ ಆರೋಪಿತೆ ಚೈತ್ರಾ ಅವರನ್ನು ಸದ್ಯ ಬೆಂಗಳೂರಿನ ಡೈರಿ ವೃತ್ತದ ಬಳಿ ಇರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.












Click it and Unblock the Notifications