ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಿಎಂಟಿಸಿ ವ್ಯವಸ್ಥೆ

|
Google Oneindia Kannada News

ಬೆಂಗಳೂರು, ಜೂನ್ 4: ಕೊರೊನಾ ವೈರಸ್ ಲಾಕ್‌ಡೌನ್‌ ಹಿನ್ನೆಲೆ ದ್ವಿತೀಯ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ಮುಂದೂಡಿಕೆಯಾಗಿತ್ತು. ಜೂನ್ ತಿಂಗಳಲ್ಲಿ ಇಂಗ್ಲಿಷ್ ಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಿಎಂಟಿಸಿ ವ್ಯವಸ್ಥೆ ಕಲ್ಪಿಸುವುದಾಗಿ ಸಾರಿಗೆ ಇಲಾಖೆ ತಿಳಿಸಿದೆ.

ಜೂನ್ 18 ರಂದು ದ್ವಿತೀಯ ಪಿಯುಸಿಯ ಇಂಗ್ಲಿಷ್ ಪತ್ರಿಕೆ ಪರೀಕ್ಷೆ ನಿಗದಿಯಾಗಿದೆ. ಆ ದಿನ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೂ ಹೋಗುವಾಗ ಮತ್ತು ಬರುವಾಗ ಉಚಿತವಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಇಂದಿನಿಂದಲೇ ಎಸಿ ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ಇಂದಿನಿಂದಲೇ ಎಸಿ ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ವಿದ್ಯಾರ್ಥಿಗಳು ಪರೀಕ್ಷೆಗೆ ಹೋಗುವ ವೇಳೆ ಪರೀಕ್ಷಾ ಪ್ರವೇಶ ಪತ್ರ ಅಥವಾ ಪ್ರಸ್ತುತ ಸಾಲಿನ ವಿದ್ಯಾರ್ಥಿ ಸ್ಮಾರ್ಟ್‌ಕಾರ್ಡ್‌ ಪಾಸ್ ತೋರಿಸಿ ಪ್ರಯಾಣಿಸಬಹುದು ಎಂದು ತಿಳಿಸಿದೆ.

Free Bmtc For Second Puc Exam Students

ಈ ಬಗ್ಗೆ ಬಿಎಂಟಿಸಿ ಬಸ್ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ಮಾಹಿತಿ ಒದಗಿಸಲು ಮತ್ತು ಘಟಕಗಳ ಸೂಚನಾ ಫಲಕದಲ್ಲಿ ಪ್ರಕಟಿಸಲು ವಿಭಾಗಿಯ ನಿಯಂತ್ರಣಾಅಧಿಕಾರಿಗಳು ಹಾಗು ವ್ಯವಸ್ಥಾಪಕರು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಆಡಳಿಯ ಮಂಡಳಿ ಸೂಚಿಸಿದೆ.

ಮಾರ್ಚ್ 4 ರಿಂದ ಮಾರ್ಚ್ 23ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ನಿಗದಿಯಾಗಿತ್ತು. ನಂತರ ಕೊರೊನಾ ವೈರಸ್ ಲಾಕ್‌ಡೌನ್‌ ಘೋಷಣೆ ಆದ ಮೇಲೆ ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಉಳಿದುಕೊಂಡಿತ್ತು. ಇದೀಗ, ಇಂಗ್ಲಿಷ್ ಪತ್ರಿಕೆ ಪರೀಕ್ಷೆಯ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎಂಬ ಕಾರಣಕ್ಕೆ ಬಿಎಂಟಿಸಿ ಜೊತೆಯಾಗಿದೆ.

English summary
BMTC administration has said that free BMTC has been arranged for students who are writing the secondary PUC exam on june 18th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X