• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜೂನ್ 02 : ಕರ್ನಾಟಕದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (SC,ST) ವರ್ಗಗಳ ಲಕ್ಷಾಂತರ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸುದ್ದಿಯೊಂದನ್ನು ನೀಡಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಉಚಿತ ಬಸ್ ಪಾಸ್ ಸೌಲಭ್ಯ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.[ಬಡ್ತಿಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ರದ್ದು: ಕರ್ನಾಟಕಕ್ಕೆ ಸುಪ್ರೀಂ ಆದೇಶ]

ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದರು.

ಪ್ರಸ್ತುತ ರಿಯಾಯಿತಿ ದರದಲ್ಲಿ ಪಾಸ್ ನೀಡಲಾಗುತ್ತಿದೆ. ವೆಚ್ಚದಲ್ಲಿ ಶೇ.50ರಷ್ಟನ್ನು ಸರ್ಕಾರ, ಶೇ.25ರಷ್ಟನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಭರಿಸುತ್ತಿದೆ. ವಿದ್ಯಾರ್ಥಿಗಳು ಶೇ.25ರಷ್ಟು ವೆಚ್ಚ ಭರಿಸಬೇಕಿತ್ತು.

ಆದರೆ, ಇದೀಗ ಮುಖ್ಯಮಂತ್ರಿ ಘೋಷಿಸಿದ ಈ ಆದೇಶ ಪ್ರಕಾರ ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಾಸ್ ಸಿಗಲಿದೆ. ಇದಕ್ಕಾಗಿ ಸರ್ಕಾರ 104 ಕೋಟಿ ರು.ಗಳನ್ನು ಹೆಚ್ಚುವರಿಯಾಗಿ ಖರ್ಚು ಮಾಡಲಿದೆ.

English summary
Karnataka Chief Minister Siddaramaiah directed authorities of the Transport Department to provide bus passes free of cost to SC/ST students studying in schools, colleges, and universities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X