ಬೆಂಗಳೂರು; ಕೋವಿಡ್ ಪರೀಕ್ಷೆಗೆ ಫೀವರ್ ಕ್ಲಿನಿಕ್ ಹುಡುಕುವುದು ಹೇಗೆ?

ಬೆಂಗಳೂರು, ಜುಲೈ 09 : ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೋವಿಡ್ - 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ನಗರದಲ್ಲಿ ಎಲ್ಲಿ ಕೋವಿಡ್ ಪರೀಕ್ಷೆ ಮಾಡಿಸಬೇಕು? ಎಂಬ ಪ್ರಶ್ನೆಗೆ ಬಿಬಿಎಂಪಿ ಉತ್ತರ ನೀಡಿದೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬಹುದು.

Recommended Video

      Reimagining the Future of Internet-Enabled Mobility Services in Bengaluru by Rajeev Gowda Part - 2

      ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಗೌತಮ್ ಕುಮಾರ್ ಜೈನ್, ಆಯುಕ್ತ ಬಿ. ಎಚ್. ಅನಿಲ್ ಕುಮಾರ್ ಈ ಕುರಿತು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಮಾಹಿತಿ ನೀಡಿದ್ದಾರೆ. ಫೀವರ್ ಕ್ಲಿನಿಕ್‌ಗಳಲ್ಲಿ ಉಚಿತವಾಗಿ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

      ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ತಪಾಸಣೆ ಮಾಡಲು ಪಾಲಿಕೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ರೆಫರಲ್ ಆಸ್ಪತ್ರೆ, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿರುವ 139 ಆಸ್ಪತ್ರೆಗಳಲ್ಲಿ ಫೀವರ್ ಕ್ಲಿನಿಕ್‌ಗಳನ್ನು ತೆರೆಯಲಾಗಿದೆ.

      Free COVID 19 Test In Fever Clinic

      ನಗರದ 61 ಖಾಸಗಿ ಆಸ್ಪತ್ರೆಗಳಲ್ಲಿ ಸಹ ಫೀವರ್ ಕ್ಲಿನಿಕ್‌ಗಳನ್ನು ತೆರೆಯಲಾಗಿದೆ. ILI/SARI ಯಿಂದ ಬಳಲುತ್ತಿರುವವರಿಗೆ ಉಚಿತ ಸ್ಯಾಂಪಲ್ ಸಂಗ್ರಹ ಹಾಗೂ ಪರೀಕ್ಷೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.

      ಆದರೆ, ಖಾಸಗಿ ಆಸ್ಪತ್ರೆಗಳಲ್ಲಿನ ಫೀವರ್ ಕ್ಲಿನಿಕ್ ಮತ್ತು ಸ್ಯಾಂಪಲ್ ಸಂಗ್ರಹ ಕೇಂದ್ರಗಳಲ್ಲಿ ಸ್ಯಾಂಪಲ್ ಸಂಗ್ರಹಕ್ಕೆ 350 ರೂ. ದರವನ್ನು ನಿಗದಿ ಮಾಡಲಾಗಿದೆ.

      ಬೆಂಗಳೂರು ನಗರದ ಜನರು ಸ್ಥಳೀಯ ಫೀವರ್ ಕ್ಲಿನಿಕ್‌ ಎಲ್ಲಿದೆ ಎಂಬ ಮಾಹಿತಿಯನ್ನು ವೆಬ್‌ ಸೈಟ್‌ಗಳಲ್ಲಿ ತಿಳಿಯಬಹುದಾಗಿದೆ. https://t.co/0ceiJiKUVL ಅಥವಾ www.bbmp.gov.in

      ಬೆಂಗಳೂರು ನಗರದಲ್ಲಿ ಬುಧವಾರ 1148 ಕೊರೊನಾ ವೈರಸ್ ಸೋಂಕಿನ ಹೊಸ ಪ್ರಕರಣ ದಾಖಲಾಗಿದೆ. ಬೆಂಗಳೂರಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,509.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+