ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಫ್ರೀ ಕಾಶ್ಮೀರ' ಗೋಡೆ ಬರಹ; ಪೊಲೀಸರಿಗೆ ಸವಾಲಾದ ತನಿಖೆ

|
Google Oneindia Kannada News

ಬೆಂಗಳೂರು ಫೆಬ್ರವರಿ 10: ನಗರದ ಚರ್ಚ್ ಸ್ಟ್ರೀಟ್​ನಲ್ಲಿ "ಫ್ರೀ ಕಾಶ್ಮೀರ' ಎಂದು ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಚರ್ಚ್​ ಸ್ಟ್ರೀಟ್​ನ ಗೋಡೆಗಳ ಮೇಲೆ ರಾತ್ರೋರಾತ್ರಿ ಫ್ರೀ ಕಾಶ್ಮೀರ, ನಾನು ಯಾವುದೇ ದಾಖಲೆ ತೋರಿಸುವುದಿಲ್ಲ ಎಂಬ ಬರಹಗಳನ್ನು ಬರೆಯಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಈವರೆಗೂ ಗೋಡೆ ಬರಹ ಬರೆದವರೂ ಮಾತ್ರ ಪತ್ತೆಯಾಗಿಲ್ಲ.

'Free Kashmir' ಬೆಂಗಳೂರಿನಲ್ಲೂ ರಾರಾಜಿಸಿದ ಗೋಡೆ ಬರಹಗಳು!'Free Kashmir' ಬೆಂಗಳೂರಿನಲ್ಲೂ ರಾರಾಜಿಸಿದ ಗೋಡೆ ಬರಹಗಳು!

ಈ ಕುರಿತು ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್​​ ಮಾತನಾಡಿ, "ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಸುವ ಉದ್ದೇಶದಿಂದ ಕೆಲವರು ಈ ಕೃತ್ಯವೆಸಗಿದ್ದಾರೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ನಾವೇ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ. ಆದರೆ, ಆರೋಪಿಗಳು ಈವರೆಗೂ ಪತ್ತೆಯಾಗಿಲ್ಲ' ಎಂದರು.

Free Kashmir Posts On Church Street Walls; Accused Still Not Arrest

ಕಳೆದ ಜನವರಿ 14 ರಂದು ವಿಧಾನಸೌಧದ ಕೂಗಳತೆ ದೂರದಲ್ಲಿರುವ ಚರ್ಚ್ ಸ್ಟ್ರೀಟ್‌ ನ ಕಾಂಪೌಂಡ್‌ಗಳಿಗೆ ಹಾಗೂ ಅಂಗಡಿ ಮುಂಗಟ್ಟುಗಳ ಶಟರ್‌ಗಳ ಮೇಲೆ ಆಕ್ಷೇಪಾರ್ಹ ಬರಹಗಳನ್ನು ಸ್ಪ್ರೇ ಮಾಡುವ ಬಣ್ಣದಿಂದ ಬರೆಯಲಾಗಿತ್ತು. ದೇಶ ವಿರೋಧಿ ಹೇಳಿಕೆಯನ್ನು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಿಎಎ ವಿರೋಧಿಸಿ ಹೇಳಿಕೆಗಳನ್ನು ಬರೆದು ಪ್ರಚೋದಿಸಲಾಗಿತ್ತು.

English summary
Free Kashmir Posts On Church Street Walls; Accused Still Not Arrest. DCP Chetan Singh Rathod Form The Special Investigation Team.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X