Free Laptop Scheme: ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಅಹ್ವಾನ
ಬೆಂಗಳೂರು: ರಾಜ್ಯದಲ್ಲಿ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ರಾಜ್ಯ ಸರ್ಕಾರ ವಿವಿಧ ಯೋಜನೆ ಜಾರಿಗೆ ತಂದಿದೆ. ಈ ಪೈಕಿ ಬಡ ವಿದ್ಯಾರ್ಥಿಗಳ ಕಲಿಕೆ ಹಾಗೂ ಭವಿಷ್ಯಕ್ಕೆ ಅನುಕೂಲ ಆಗುವ ರೀತಿ ಉಚಿತ ಲ್ಯಾಪ್‌ಟಾಪ್ ಹಂಚಿಕೆ ಯೋಜನೆ ಕೂಡ ಜಾರಿಯಲ್ಲಿ ಇದೆ. ಈಗ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ವಿತರಣೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಕೆ ಹೇಗೆ? ಮುಂದೆ ಓದಿ.
ಆಧುನಿಕ ಕಾಲದಲ್ಲಿ ಕಲಿಕೆ ಜೊತೆ ಲ್ಯಾಪ್‌ಟಾಪ್ ಅಥವಾ ಕಂಪ್ಯೂಟರ್ ಶಿಕ್ಷಣವು ಕೂಡ ಬೆರೆತು ಹೋಗಿದೆ. ಆದರೆ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಕೊಳ್ಳುವುದು ಕಷ್ಟವಾಗುತ್ತೆ ಎಂಬ ಉದ್ದೇಶದಿಂದ ಸರ್ಕಾರ ಕೂಡ ವಿವಿಧ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್ ಪಡೆಯಬಹುದು. ಅರ್ಹ ವಿದ್ಯಾರ್ಥಿಗಳಿಗೆ ಈ ಯೋಜನೆ ಅಡಿಯಲ್ಲಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿದೆ. ಈಗಲೂ ಅದೇ ರೀತಿ ಅರ್ಹ ವಿದ್ಯಾರ್ಥಿಗಳಿಂದ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆ ಅಡಿ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ಮುಂದೆ ಇದೆ.

ಉಚಿತ ಲ್ಯಾಪ್‌ಟಾಪ್‌ಗೆ ಅರ್ಜಿ ಸಲ್ಲಿಕೆ
ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ, ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗವನ್ನು ಮಾಡ್ತಿರುವ ಪ್ರಥಮ ಅಥವಾ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸೋದಕ್ಕೆ ನಿಯಮಗಳು ಅನ್ವಯಿಸಲಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?
ಕಾರ್ಮಿಕ ಅಧಿಕಾರಿ -1, ಉಪ ವಿಭಾಗ ಬೆಂಗಳೂರು ಇವರ ಕಾರ್ಯವ್ಯಾಪ್ತಿಯಲ್ಲಿ ನೋಂದಣಿ ಅಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಅರ್ಜಿ ನಮೂನೆಯನ್ನು ಆಯಾ ವೃತ್ತ ಕಛೇರಿ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಪಡೆದು ಅಗತ್ಯ ದಾಖಲಾತಿ ಜೊತೆಗೆ, ಅರ್ಜಿ ಸ್ವೀಕರಿಸಿದ ಕಚೇರಿಗೆ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನ ಎಂದು ತಿಳಿಸಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿ ಕಚೇರಿ, ಉಪ ವಿಭಾಗ-1, ಬೆಂಗಳೂರು. ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಕಟ್ಟಡ, ಮೊದಲ ಮಹಡಿ, ಮಂಜುನಾಥ ನಗರ ಬಾಗಲಗುಂಟೆ ಬೆಂಗಳೂರು -73 ಈ ವಿಳಾಸವನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 9845587605, 8105084941 ಮೂಲಕ ಸಂಪರ್ಕ ಮಾಡಿ ಅರ್ಜಿ ಸಲ್ಲಿಕೆಯ ಕುರಿತು ಮಾಹಿತಿ ಪಡೆಯಬಹುದು ಎಂದು ಮಾಹಿತಿ ನೀಡಲಾಗಿದೆ.












Click it and Unblock the Notifications