ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ರಾಜ್ಯಪಾಲ ಥಾವರ್ ಚೆಂದ್ ಗೆಹಲೋಟ್ ಸನ್ಮಾನ
ಬೆಂಗಳೂರು ಆಗಸ್ಟ್ 09: ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಕ್ವಿಟ್ ಇಂಡಿಯಾ ಚಳವಳಿಯ ವರ್ಷಾಚರಣೆ (ಆ.9) ಪ್ರಯುಕ್ತ ರಾಜ್ಯಪಾಲ ಥಾವರ್ ಚೆಂದ್ ಗೆಹಲೋಟ್ ಅವರು ಮಂಗಳವಾರ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.
ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಸಂಸ್ಮರಣಾ ದಿನಾಚರಣೆಯಾದ ಕ್ವಿಟ್ ಇಂಡಿಯಾ ವರ್ಷಾಚರಣೆ ಹಿನ್ನೆಲೆ ರಾಜ್ಯಪಾಲ ಥಾವರ್ ಚೆಂದ್ ಗೆಹಲೋತ್ ಅವರು ಮಲ್ಲೇಶ್ವರಂನಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ನಾಗಭೂಷಣ್ ರಾವ್ ಅವರ ಮೆನೆಗೆ ತೆರಳಿ ಸನ್ಮಾನಿಸಿದರು. ಈ ವೇಳೆ ನಾಗಭೂಷಣ್ ರಾವ್ ಅವರಿಗೆ ರಾಷ್ಟ್ರಧ್ವಜ ನೀಡಿ ಗೌರವಿಸಲಾಯಿತು.
ನಂತರ ರಾವ್ ಅವರ ಆರೋಗ್ಯ ಕುರಿತು ವಿಚಾರಿಸಿದ ರಾಜ್ಯಪಾಲರು. ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಸಾಧನೆ, ಸೇವೆ, ತ್ಯಾಗವನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಮಲ್ಲೇಶ್ವರಂ ಕ್ಷೇತ್ರದ ಶಾಸಕರೂ ಆದ ಉನ್ನತ ಶಿಕ್ಷಣ ಮತ್ತು ಐಟಿ ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತರು ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು.
ನಂತರ ಮಧ್ಯಾಹ್ನ ರಾಜ್ಯಪಾಲ ಥಾವರ್ ಚೆಂದ್ ಗೆಲಹೋತ್ ಅವರು ಹಲಸೂರು ಬಡವಣೆಯಲ್ಲಿರುವ ಮತ್ತೊರ್ವ ಸ್ವಾತಂತ್ರ್ಯ ಹೋರಾಟಗಾರಾದ ಆರ್.ನಾರಾಯಣಪ್ಪ ಅವರಿಗೆ ಮನೆಗೆ ತೆರಳಿ ಸನ್ಮಾನಿಸಲಿದ್ದಾರೆ.

ಸರ್ಕಾರಕ್ಕೆ ರಾಜ್ಯಪಾಲರಿಂದ ಪತ್ರ
ಭಾರತ ಅಮೃತ ಮಹೋತ್ಸವದ ಸುಸಂದರ್ಭದಲ್ಲಿದೆ. ಅಲ್ಲದೇ ಆಗಸ್ಟ್ 9ರಂದು ಕ್ವಿಟ್ ಇಂಡಿಯಾ ವರ್ಷಾಚರಣೆ ಆಚರಿಸಲಾಗುತ್ತದೆ. ಈ ಸಂಬಂಧ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಶ್ರಮಿಸಿ ದೇಶಪ್ರೇಮ ಮೆರೆದ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲು ಕೆಲವು ದಿನಗಳ ಹಿಂದೆ ರಾಜ್ಯಪಾಲ ಥಾವರ್ ಚೆಂದ್ ಗೆಲಹೋತ್ ಅವರು ನಿರ್ಧರಿಸಿದ್ದರು. ಈ ಕುರಿತು ಕ್ರಮ ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಮುಖೇನ ತಿಳಿಸಿದ್ದರು ಎಂದು ತಿಳಿದು ಬಂದಿದೆ.
Recommended Video
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications