• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ರಾಜ್ಯಪಾಲ ಥಾವರ್ ಚೆಂದ್ ಗೆಹಲೋಟ್ ಸನ್ಮಾನ

|
Google Oneindia Kannada News

ಬೆಂಗಳೂರು ಆಗಸ್ಟ್ 09: ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಕ್ವಿಟ್ ಇಂಡಿಯಾ ಚಳವಳಿಯ ವರ್ಷಾಚರಣೆ (ಆ.9) ಪ್ರಯುಕ್ತ ರಾಜ್ಯಪಾಲ ಥಾವರ್ ಚೆಂದ್ ಗೆಹಲೋಟ್ ಅವರು ಮಂಗಳವಾರ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.

ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಸಂಸ್ಮರಣಾ ದಿನಾಚರಣೆಯಾದ ಕ್ವಿಟ್ ಇಂಡಿಯಾ ವರ್ಷಾಚರಣೆ ಹಿನ್ನೆಲೆ ರಾಜ್ಯಪಾಲ ಥಾವರ್ ಚೆಂದ್ ಗೆಹಲೋತ್ ಅವರು ಮಲ್ಲೇಶ್ವರಂನಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ನಾಗಭೂಷಣ್ ರಾವ್ ಅವರ ಮೆನೆಗೆ ತೆರಳಿ ಸನ್ಮಾನಿಸಿದರು. ಈ ವೇಳೆ ನಾಗಭೂಷಣ್ ರಾವ್ ಅವರಿಗೆ ರಾಷ್ಟ್ರಧ್ವಜ ನೀಡಿ ಗೌರವಿಸಲಾಯಿತು.

ನಂತರ ರಾವ್‌ ಅವರ ಆರೋಗ್ಯ ಕುರಿತು ವಿಚಾರಿಸಿದ ರಾಜ್ಯಪಾಲರು. ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಸಾಧನೆ, ಸೇವೆ, ತ್ಯಾಗವನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಮಲ್ಲೇಶ್ವರಂ ಕ್ಷೇತ್ರದ ಶಾಸಕರೂ ಆದ ಉನ್ನತ ಶಿಕ್ಷಣ ಮತ್ತು ಐಟಿ ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತರು ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು.

ನಂತರ ಮಧ್ಯಾಹ್ನ ರಾಜ್ಯಪಾಲ ಥಾವರ್ ಚೆಂದ್ ಗೆಲಹೋತ್ ಅವರು ಹಲಸೂರು ಬಡವಣೆಯಲ್ಲಿರುವ ಮತ್ತೊರ್ವ ಸ್ವಾತಂತ್ರ್ಯ ಹೋರಾಟಗಾರಾದ ಆರ್‌.ನಾರಾಯಣಪ್ಪ ಅವರಿಗೆ ಮನೆಗೆ ತೆರಳಿ ಸನ್ಮಾನಿಸಲಿದ್ದಾರೆ.

Freedom fighter receive Honour by governor Thawar Chand Gehlot

ಸರ್ಕಾರಕ್ಕೆ ರಾಜ್ಯಪಾಲರಿಂದ ಪತ್ರ

ಭಾರತ ಅಮೃತ ಮಹೋತ್ಸವದ ಸುಸಂದರ್ಭದಲ್ಲಿದೆ. ಅಲ್ಲದೇ ಆಗಸ್ಟ್ 9ರಂದು ಕ್ವಿಟ್ ಇಂಡಿಯಾ ವರ್ಷಾಚರಣೆ ಆಚರಿಸಲಾಗುತ್ತದೆ. ಈ ಸಂಬಂಧ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಶ್ರಮಿಸಿ ದೇಶಪ್ರೇಮ ಮೆರೆದ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲು ಕೆಲವು ದಿನಗಳ ಹಿಂದೆ ರಾಜ್ಯಪಾಲ ಥಾವರ್ ಚೆಂದ್ ಗೆಲಹೋತ್ ಅವರು ನಿರ್ಧರಿಸಿದ್ದರು. ಈ ಕುರಿತು ಕ್ರಮ ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಮುಖೇನ ತಿಳಿಸಿದ್ದರು ಎಂದು ತಿಳಿದು ಬಂದಿದೆ.

Recommended Video

   BJP ಈ 6 ಸಂಸದರಿಗೆ ಮುಂದಿನ ಚುನಾವಣೆಯಲ್ಲಿ ನೋ ಟಿಕೆಟ್? | *Politics | OneIndia Kannada
   English summary
   Freedom fighters receive Honour by governor Thawar Chand Gehlot .
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X