ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್!

|
Google Oneindia Kannada News

ಬೆಂಗಳೂರು, ಜುಲೈ 11: ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣ ತಪ್ಪಿರುವ ಹಿನ್ನೆಲೆ ಒಂದು ವಾರ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿ ಮಾಡಲಾಗಿದೆ.

Recommended Video

Corona ವಿರುದ್ಧ R Ashok ಮಾಸ್ಟರ್ ಪ್ಲಾನ್ | Oneindia Kannada

14.07.2020ರ ಮಂಗಳವಾರ ರಾತ್ರಿ 8.00 ಗಂಟೆಯಿಂದ ಏಳು ದಿನಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವಿಟ್ಟರ್‌ನಲ್ಲಿ ಖಚಿತಪಡಿಸಿದ್ದಾರೆ..

ಪ್ರವಾಸೋದ್ಯಮ ಸಚಿವ ಸಿಟಿ ರವಿಗೆ ಕೊರೊನಾ ಪಾಸಿಟಿವ್!ಪ್ರವಾಸೋದ್ಯಮ ಸಚಿವ ಸಿಟಿ ರವಿಗೆ ಕೊರೊನಾ ಪಾಸಿಟಿವ್!

ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷದಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.

1 Week Complete Lockdown in Bengaluru from july 14th

ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೊವಿಡ್ ನಿಯಂತ್ರಣ ಮಾಡಲು ಒಂದು ವಾರ ಲಾಕ್‌ಡೌನ್‌ ಅಗತ್ಯ ಎಂದು ತಜ್ಞರು ಸಿಎಂಗೆ ಸಲಹೆ ನೀಡಿದ್ದರು. ತಜ್ಞರ ಸಲಹೆ ಸಮ್ಮತಿಸಿರುವ ಯಡಿಯೂರಪ್ಪ ಬೆಂಗಳೂರು ಲಾಕ್‌ಡೌನ್ ಮಾಡಲು ಒಪ್ಪಿದ್ದಾರೆ.

English summary
Karnataka Govt has announced 7 days complete Lockdown in Bengaluru and bengaluru rural from july 14th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X