ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಿಯುಸಿ ಪರೀಕ್ಷೆ ನಡೆಸಲಿದೆಯೇ ಎಸ್‌ಎಸ್‌ಎಲ್‌ಸಿ ಮಂಡಳಿ?

|
Google Oneindia Kannada News

ಬೆಂಗಳೂರು, ಜನವರಿ 24: ಪಿಯುಸಿ ಪರೀಕ್ಷೆಯನ್ನೂ ಇನ್ನುಮುಂದೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸಲಿದೆ. ಹೀಗೊಂದು ನಿರ್ಧಾರವನ್ನು ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ.

ಈ ಶೈಕ್ಷಣಿಕ ವರ್ಷದಲ್ಲಿ ಮಾತ್ರ ಯಾವುದೇ ಬದಲಾವಣೆ ಇಲ್ಲದೆ , ಪ್ರಥಮ ಮತ್ತು ದ್ವತೀಯ ಪಿಯುಸಿ ಪರೀಕ್ಷೆಗಳನ್ನು ಪದವಿಪೂರ್ವ ಶಿಕ್ಷಣ ಇಲಾಖೆಯಿಂದಲೇ ನಡೆಸಲಾಗುವುದು.ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಪ್ರೌಢಶಿಕ್ಷಣ ಇಲಾಖೆಯಿಂದಲೇ ನಡೆಸಲಾಗುತ್ತದೆ. ನಂತರ 2020-2021ನೇ ಸಾಲಿನಿಂದ ಪ್ರೌಢಶಿಕ್ಷಣ ಮಂಡಳಿಯೇ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆ ನಡೆದಿದೆ.

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಶಿಕ್ಷಣ ಇಲಾಖೆ ಮೂಲಗಳ ಪ್ರಕಾರ ಈಗಾಗಲೇ ಹಲವು ವರ್ಷಗಳಿಂದ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳಿಂದ ಸರ್ಕಾರ ತತ್ತರಿಸಿದೆ. ಇದನ್ನು ತಡೆಯಲು ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಅಗತ್ಯವಿದೆ.

From 2020, SSLC Board will conduct PU exams

ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕಾರ್ಯಗಳನ್ನು ಯಾವುದೇ ಗೊಂದಲ, ಸಮಸ್ಯೆಗಳಿಲ್ಲದೆ ನಡೆಸುತ್ತಿರುವ ಪ್ರೌಢಶಿಕ್ಷಣ ಮಂಡಳಿಗೆ ನೀಡಲು ಸರ್ಕಾರ ಮುಂದಾಗಿದೆ.

English summary
After this year’s SSLC and PUC board exams are over, preparations will begin for the biggest shake up in the examination system in the department of education .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X