ಬೆಂಗಳೂರಲ್ಲಿ ಇನ್ಮುಂದೆ ಈ ಆರೋಗ್ಯ ಸೇವೆ ಫ್ರೀ.. ಫ್ರೀ
ಬೆಂಗಳೂರಿನಲ್ಲಿ ಆರೋಗ್ಯ ಸೇವೆ ಎನ್ನುವುದು ಸಿಕ್ಕಾಪಟ್ಟೆ ದುಬಾರಿ. ಬೆಂಗಳೂರಿನಲ್ಲಿ ಸಣ್ಣ ಜ್ವರ ಬಂದರೂ, ನಿಮ್ಮ ಕೈನಿಂದ ಒಂದರಿಂದ ಎರಡು ಸಾವಿರರೂಪಾಯಿ ಖರ್ಚಾಗುವುದು ಗ್ಯಾರಂಟಿ. ಬೆಂಗಳೂರಿನಲ್ಲಿ ಆರೋಗ್ಯ ಸೇವೆಯನ್ನು ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ಮುಂದೆ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ನಿಮಗೆ ಹಲವು ಒಳ್ಳೆಯ ಸೇವೆಗಳು ಸಿಗಲಿವೆ. ಸರ್ಕಾರದ ನಿರ್ಧಾರವೇನು. ಇದರಿಂದ ಯಾವ ರೀತಿ ಉಪಯೋಗವಾಗಲಿದೆ ಎನ್ನುವ ವಿವರ ಇಲ್ಲಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ಆರೋಗ್ಯ ಸೇವೆಗಳನ್ನು ಪರಿಚಯ ಮಾಡಲು ರಾಜ್ಯ ಸರ್ಕಾರವು ಮುಂದಾಗಿದೆ. ಇದರ ಭಾಗವಾಗಿ, ಬೆಂಗಳೂರಿನಲ್ಲಿರುವ ನಮ್ಮ ಕ್ಲಿನಿಕ್‌ಗಳಲ್ಲಿ ಹಲವು ಹೊಸ ಸೇವೆಗಳು ಪ್ರಾರಂಭವಾಗಲಿವೆ. ಅವುಗಳಲ್ಲಿ ಮುಖ್ಯವಾಗಿ ಕಣ್ಣಿನ ಪರೀಕ್ಷೆ ಮತ್ತು ಚಿಕಿತ್ಸೆ ಸೇರಿದೆ. ಅಲ್ಲದೇ ಮಕ್ಕಳಿಗೆ ಲಸಿಕೆ ಹಾಗೂ ನಾಯಿ ಕಡಿತಕ್ಕೆ ಇಂಜೆಕ್ಷನ್ ಸೇರಿದಂತೆ ಹಲವು ಸೇವೆಗಳನ್ನು ಸೇರ್ಪಡೆ ಮಾಡಲು ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಮುಂದಾಗಿದೆ.

ಇನ್ನು ನಮ್ಮ ಕ್ಲಿನಿಕ್‌ಗಳನ್ನು ಫಸ್ಟ್ ಕ್ಲಾಸ್ ಸೇವೆ ನೀಡಲು ಬಿಬಿಎಂಪಿ ಹಲವು ಪ್ಲಾನ್‌ಗಳನ್ನು ಮಾಡಿಕೊಂಡಿದೆ. ಈ ಆಸ್ಪತ್ರೆಗಳನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಹಲವು ವಿನೂತನ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಅಲ್ಲದೇ ಈ ರೀತಿ ಕ್ಲಿನಿಕ್ ಅಭಿವೃದ್ಧಿ ಮಾಡುವುದಕ್ಕೆ ಬಿಬಿಎಂಪಿಯ ಹಣವನ್ನು ಬಳಸುತ್ತಿಲ್ಲ. ಬದಲಾಗೆ ರಾಷ್ಟ್ರೀಯ ನಗರ ಆರೋಗ್ಯ ಮಿಷನ್ ಯೋಜನೆಯ ಅಡಿಯಲ್ಲಿ ನೀಡುವ ಹಣವನ್ನು ಬಳಸುತ್ತಿರುವುದಾಗಿ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಹೇಳಿದ್ದಾರೆ.
ಇನ್ನು ಬೆಂಗಳೂರಿನಲ್ಲಿರುವ ನಮ್ಮ್ ಕ್ಲಿನಿಕ್‌ಗಳಲ್ಲಿ ಇದೀಗ 12 ವಿವಿಧ ಆರೋಗ್ಯ ಸೇವೆಗಳನ್ನು ನೀಡಲಾಗುತ್ತಿದೆ. ಇದರೊಂದಿಗೆ 14ಕ್ಕೂ ಹೆಚ್ಚು ಮಾದರಿಯ ರೋಗ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಚಿಕಿತ್ಸೆಯನ್ನು ಸಹ ನೀಡಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ನವಜಾತ ಶಿಶುಗಳಿಗೆ ನೀಡುವ ಇಂಜೆಕ್ಷನ್ ಸಹ ಇಲ್ಲಿ ನೀಡಲಾಗುತ್ತದೆ. ನಾಯಿ ಕಚ್ಚಿದಾಗ ಕೊಡುವ ಆ್ಯಂಟಿ ರೇಬಿಸ್ ಚುಚ್ಚುಮದ್ದು ಸೇರಿದಂತೆ ವಿವಿಧ ಸೇವೆಗಳನ್ನು ನೀಡಲಾಗುತ್ತಿದೆ. ಇದೇ ಕಾರಣಕ್ಕಾಗಿ ಬೆಂಗಳೂರಿನ ನಮ್ಮ ಕ್ಲಿನಿಕ್‌ಗಳನ್ನು ಫಸ್ಟ್ ಕ್ಲಾಸ್ ಆಗಿ ಅಭಿವೃದ್ಧಿ ಮಾಡಲು ಬಿಬಿಎಂಪಿ ಮುಂದಾಗಿದೆ.
100 ನಮ್ಮ ಕ್ಲಿನಿಕ್‌ಗಳಲ್ಲಿ ಬಿಬಿಎಂಪಿಯ ಆರೋಗ್ಯ ವಿಭಾಗ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ವಿವಿಧ ಆರೋಗ್ಯ ಸೇವೆಗಳನ್ನು ನೀಡಲಾಗುತ್ತಿದೆ. ಆ ಆರೋಗ್ಯ ಸೇವೆಗಳನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಜಾಹೀರಾತು ನೀಡಲಾಗುತ್ತಿದೆ. ಅಲ್ಲದೇ ಆರೋಗ್ಯ ಸಮಸ್ಯೆಯಿಂದ ಹಾಗೂ ಆಸ್ಪತ್ರೆಗೆ ಬರುವವರಿಗೆ ಶುದ್ಧ ಕುಡಿವ ನೀರಿನ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಯ ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗುತ್ತಿದೆ. ಈಗಾಗಲೇ ಕಣ್ಣಿನ ಪರೀಕ್ಷೆ ಹಾಗೂ ಚಿಕಿತ್ಸೆಗೆ ಅವಶ್ಯವಿರುವ ಎಲ್ಲ ಮಾದರಿಯ ಸಿದ್ಧತೆಗಳನು ಮಾಡಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಬೆಂಗಳೂರಿನ 54 ನಮ್ಮ ಕ್ಲಿನಿಕ್‌ಗಳಲ್ಲಿ ಕಣ್ಣಿನ ಚಿಕಿತ್ಸೆ ಹಾಗೂ ಪರೀಕ್ಷೆ ನಡೆಸುವುದಕ್ಕೆ ಬಿಬಿಎಂಪಿ ಪ್ಲಾನ್ ಮಾಡಿಕೊಂಡಿದೆ.
ಏನಿದು ನಮ್ಮ ಕ್ಲಿನಿಕ್: ಬೆಂಗಳೂರಿನಲ್ಲಿ ಇರುವವರಿಗೆ ಗುಣಮಟ್ಟದ, ಉತ್ತಮ ಹಾಗೂ ಉಚಿತ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಸರ್ಕಾರವು ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸಿದೆ. ಎರಡು ವರ್ಷಗಳ ಹಿಂದೆ ಈ ಮಾದರಿಯ ಕ್ಲಿನಿಕ್‌ಗಳನ್ನು ಪ್ರಾರಂಭಿಸಿತ್ತು. ದೆಹಲಿಯಲ್ಲಿ ಎಎಪಿ (ಆಮ್ ಆದ್ಮಿ ಪಾರ್ಟಿ)ಯ ಮೊಹಲ್ಲಾ ಕ್ಲಿನಿಕ್ ಮಾದರಿಯಲ್ಲಿ ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸಲಾಗಿತ್ತು. ಇದೀಗ ನಮ್ಮ ಕ್ಲಿನಿಕ್‌ಗಳಿಗೆ ಹೊಸ ಲುಕ್ ನೀಡಲಾಗುತ್ತಿದೆ.












Click it and Unblock the Notifications