ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿರಾ ಕ್ಯಾಂಟೀನ್‌ ಊಟದಲ್ಲಿ, ಬ್ಯಾಕ್ಟೀರಿಯಾ, ಫಂಗಸ್ ಪತ್ತೆ

|
Google Oneindia Kannada News

ಬೆಂಗಳೂರು, ಮಾರ್ಚ್ 19: ಇಂದಿರಾ ಕ್ಯಾಂಟೀನ್ ಊಟದಲ್ಲಿ ಬ್ಯಾಕ್ಟೀರಿಯಾ, ಫಂಗಸ್ ಪತ್ತೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಸಾರ್ವಜನಿಕ ಆರೋಗ್ಯ ಸಂಸ್ಥೆ ನಡೆಸಿದ ವರದಿಯಲ್ಲಿ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ. ಆಹಾರ ಸೇವಿಸಿದವರಿಗೆ ವಾಂತಿ, ಭೇದಿ, ಮೆದುಳು ಸಂಬಂಧಿ ಕಾಯಿಲೆ ಸಂಭವ ಹೆಚ್ಚಿದೆ ಎಂದು ಸಾರ್ವಜನಿಕ ಆರೋಗ್ಯ ಸಂಸ್ಥೆ ತಿಳಿಸಿದೆ.

ಬಿಎಂಪಿ ಸದಸ್ಯರಿಗೆ ಲಕ್ಷುರಿ ಭೋಜನ ಬದಲು ಇಂದಿರಾ ಕ್ಯಾಂಟೀನ್ ಊಟ ಬಿಎಂಪಿ ಸದಸ್ಯರಿಗೆ ಲಕ್ಷುರಿ ಭೋಜನ ಬದಲು ಇಂದಿರಾ ಕ್ಯಾಂಟೀನ್ ಊಟ

ಮೇಯರ್ ಗಂಗಾಂಬಿಕೆ ವಾಸವಿರುವ ಜಯನಗರ ವಾರ್ಡ್ ನ ಇಂದಿರಾ ಕ್ಯಾಂಟೀನ್‌ನಲ್ಲಿ 150 ಎಂಎಲ್ ಸಾಂಬಾರು, ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನಿವಾಸವಿರುವ ಜೆಪಿ ನಗರದ ವಾರ್ಡ್‌ನ ಇಂದಿರಾ ಕ್ಯಾಂಟೀನ್‌ನಲ್ಲಿ 100 ಎಂಎಲ್ ಸಾಂಬಾರು, ಉಪಮೇಯರ್ ಭದ್ರೇಗೌಡ ವಾಸವಿರುವ ನಾಗಪುರ ವಾರ್ಡ್‌ನ ಕ್ಯಾಂಟೀನ್‌ನಿಂದ 460 ಗ್ರಾಂ ಅನ್ನ ಹಾಗೂ 240 ಎಂಎಲ್ ಸಾಂಬಾರು ಮಾದರಿಯನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಯ ಪ್ರಯೋಗಾಲಯದ ಪರೀಕ್ಷೆ ನೀಡಲಾಗಿತ್ತು.

fungus bacteria found in Indira canteen food

ಆಹಾರದಲ್ಲಿ ಬ್ಯಾಕ್ಟೀರಿಯಾ, ಫಂಗಸ್ ಪತ್ತೆಯಾಗಿದ್ದು, ಮನುಷ್ಯರು ಸೇವನೆಗೆ ಯೋಗ್ಯವಲ್ಲ ಎಂದು ಸಾರ್ವಜನಿಕ ಆರೋಗ್ಯ ಸಂಸ್ಥೆ ಮತ್ತು ಎಂ.ಎಸ್ ರಾಮಯ್ಯ ಆಸ್ಪತ್ರೆ ವರದಿ ನೀಡಿದೆ. ಇಂತಹ ಆಹಾರ ಸೇವನೆ ಮಾಡುವವರಿಗೆ ವಾಂತಿ, ಭೇದಿ ಮತ್ತು ಮೆದುಳು ಸಂಬಂಧಿಸಿದ ಕಾಯಿಲೆ ಮತ್ತು ಕಡಿಮೆ ರಕ್ತದೊತ್ತಡ ಸಮಸ್ಯೆಗಳು ಎದುರಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಶೀಘ್ರದಲ್ಲೇ ಬದಲಾಗಲಿದೆ ಇಂದಿರಾ ಕ್ಯಾಂಟೀನ್ ಮೆನು ಶೀಘ್ರದಲ್ಲೇ ಬದಲಾಗಲಿದೆ ಇಂದಿರಾ ಕ್ಯಾಂಟೀನ್ ಮೆನು

ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಯೋಗಾಲಯದ ವರದಿಗಳನ್ನು ಬಿಡುಗಡೆ ಮಾಡಿ ಮಾಡತನಾಡಿದ ಪಾಲಿಕೆಯ ಗೋವಿಂದರಾಜನಗರ ವಾರ್ಡ್ ಬಿಜೆಪಿ ಸದಸ್ಯ ಉಮೇಶ್ ಶೆಟ್ಟಿ, ಪ್ರತಿನಿತ್ಯ ನಗರದ 198 ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಾವಿರಾರು ಮಂದಿ ಬಡವರು ಊಟ ಸೇವನೆ ಮಾಡುತ್ತಿದ್ದಾರೆ. ಅವರ ಆರೋಗ್ಯ ಗತಿ ಏನು ಎಂಬ ಆತಂಕ ಮೂಡಿದೆ.

English summary
Fungus and Bacteria found in Indira canteen food. Deputy Cheif minister Parameshwar ordered for food safety and checking.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X