G.Janardhana Reddy: ಗಾಲಿ ಜನಾರ್ದನ ರೆಡ್ಡಿ ದಂಪತಿಗೆ CBI ವಿಶೇಷ ಕೋರ್ಟ್ ಶಾಕ್
ಗಂಗಾವತಿ, ಜೂನ್, 13: ಗಂಗಾವತಿಯಿಂದ ಕೆಆರ್‌ಪಿಪಿ ಪಕ್ಷದಿಂದ ಸ್ಪರ್ಧೆಗಿಳಿದು ಗೆಲುವುಸಾಧಿಸಿದ್ದ ಗಾಲಿ ಜನಾರ್ಧನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮೀಗೆ ಸಿಬಿಐ ವಿಶೇಷ ಕೋರ್ಟ್ ಶಾಕ್ ನೀಡಿದೆ.
ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಅರುಣಾ ಲಕ್ಷ್ಮೀ ರೆಡ್ಡಿ ಅವರ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಇದೀಗ ಆದೇಶ ಹೊರಡಿಸಿದೆ. ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಮುಟ್ಟುಗೋಲು ಹಾಕುವಂತೆ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದ್ದು, ಇದು ಬಳ್ಳಾರಿ ಗಣಿಧನಿ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿಗೆ ತಲೆನೋವಾಗಿ ಪರಿಣಮಿಸಿದೆ. ಕ್ರಿಮಿನಲ್ ಕೇಸ್ ಮುಗಿಯುವವರೆಗೂ ಆಸ್ತಿ ಮುಟ್ಟುಗೋಲು ಹಾಕಲು ಆದೇಶ ಹೊರಡಿಸಿದೆ.
ಹಾಗೆಯೇ ಮಂಗಳವಾರ (ಜೂನ್ 13) ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಕುಟುಂಬ ಸಮೇತ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಪತ್ನಿ ಅರುಣಾ ಲಕ್ಷ್ಮಿ, ಮಗಳು ರಮಿಣಿ, ಆಳಿಯ ರಾಜೀವ್ ಜೊತೆ ಜನಾರ್ದನ ರೆಡ್ಡಿ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕುಟುಂಬ ಸಮೇತ ಧರ್ಮಸ್ಥಳದಿಂದ ನೇರವಾಗಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಜನಾರ್ದನ್ ರೆಡ್ಡಿ ದಂಪತಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಿಬಿಐ ವಿಶೇಷ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಧರ್ಮಸ್ಥಳದಲ್ಲಿ ಪ್ರತಿಕ್ರಿಯಿದ ಜನಾರ್ದನ್ ರೆಡ್ಡಿ ಅವರು, ನನ್ನ 150 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದರು. ಅದರಲ್ಲಿ 80ಕ್ಕೂ ಹೆಚ್ಚು ಆಸ್ತಿಗಳನ್ನು ಕೋರ್ಟ್ ನಿನ್ನೆ ಬಿಡುಗಡೆ ಮಾಡಿದೆ. ಉಳಿದ 72 ಆಸ್ತಿಗಳು ಕೇಸ್ ಇತ್ಯರ್ಥ ಆದ ಮೇಲೆ ಪರಿಹಾರ ಆಗುತ್ತದೆ ಎಂದರು.












Click it and Unblock the Notifications